ತತ್ವ, ಸಿದ್ಧಾಂತಗಳನ್ನೇ ಬದಲಿಸಿಕೊಂಡ ಮಾಜಿ ಮುಖ್ಯಮಂತ್ರಿ, ಮಾಜಿ ಪ್ರಧಾನಿ

12111111111
ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾ ರಾಮಯ್ಯ ಪರ ಪ್ರಚಾರ ಕಾರ್ಯಕ್ರಮವನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯ ಎಂ.ಆರ್.ಸೀತರಾಮ್, ಶಾಸಕ ಪುಟ್ಟಸ್ವಾಮಿಗೌಡ ಮತ್ತಿತರರು ಇದ್ದರು.
Published on

ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತತ್ವ, ಸಿದ್ಧಾಂತಗಳನ್ನೇ ಬದಲಿಸಿಕೊಂಡಿದ್ದು ಇದೀಗ ಪ್ರಧಾನಿ ನರೇಂದ್ರ ಮೋದಿ ಜಪ ಮಾಡುತ್ತಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವ್ಯಂಗ್ಯವಾಡಿದ್ದಾರೆ.

ಚಿಕ್ಕಬಳ್ಳಾಪುರ, ಗೌರಿಬಿದನೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾ ರಾಮಯ್ಯ ಪರ ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಧೋರಣೆಯನ್ನು ತರಾಟೆಗೆ ತೆಗೆದುಕೊಂಡರು.

ಕಳೆದ ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಗ್ಯಾರೆಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದಾಗ, ಜನ ನಂಬುತ್ತಿರಲಿಲ್ಲ. ಜೆಡಿಎಸ್ ಮತ್ತು ಬಿಜೆಪಿ ಸಹ ಸರ್ಕಾರ ದಿವಾಳಿಯಾಗುತ್ತದೆ ಎಂತಲೇ ಟೀಕಿಸಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ, ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂಬುದಾಗಿ ಹಿಂದೆ ಸ್ವತಃ ದೇವೇಗೌಡರು ಹೇಳಿದ್ದರು. ನಮ್ಮ ಪಕ್ಷ ಕುಮಾರ ಸ್ವಾಮಿಯನ್ನು ಮುಖ್ಯಮಂತ್ರಿ, ದೇವೇಗೌಡರನ್ನು ಪ್ರಧಾನಿ ಮಾಡಿತ್ತು. ಇದನ್ನು ನೆನಪಿಸಿಕೊಳ್ಳುತ್ತಿಲ್ಲ. ಬದಲಿಗೆ ಇಬ್ಬರು ತತ್ವ, ಸಿದ್ಧಾಂತಗಳನ್ನೇ ಬದಲಿಸಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಜಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಯಾರ ಆಗಲಿ ಸುಳ್ಳು ಹೇಳಬಾರದು, ಸತ್ಯ ನುಡಿಯಬೇಕು. ನಾವು ಎಲ್ಲಾ ದೇವರ ಭಕ್ತರು. ಆದರೆ, ಕೆಲವರು ಶ್ರೀರಾಮನ ಹೆಸರಿನಲ್ಲಿ ಮತಯಾಚಿಸುವ ಪಾಪದ ಕೆಲಸ ಮಾಡುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net