ಪರ್ಯಾಯ ನೀರು ಸರಬರಾಜು ಕ್ರಮ ಕೈಗೊಳ್ಳಿ

13 HRR
Published on

ಹರಿಹರ: ಬೇಸಿಗೆ ಆರಂಭವಾಗಿರುವುದರಿಂದ ಹಳ್ಳಿಗಳಲ್ಲಿ ನೀರಿನ ಕೊರತೆ, ಕೊಳವೆಬಾವಿಗಳಲ್ಲಿ ಅಂತರ್ಜಲ ಕಡಿಮೆಯಾಗುವುದು ಸಹಜ. ಈ ವೇಳೆ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವ ಗ್ರಾಮಗಳಲ್ಲಿ ಪರ್ಯಾಯವಾಗಿ ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡಲು ಅಭಿವೃದ್ಧಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಮುಂದಾಗಬೇಕಿದೆ ಎಂದರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಪಿ. ಸುಮಲತಾ ಸೂಚಿಸಿದರು.

ತಾಪಂ ಸಭಾಂಗಣದಲ್ಲಿ ಮಂಗಳವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದಿಂದ ಹಮ್ಮಿಕೊಂಡಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಟಾಸ್ಕ್ ಪೋರ್ಸ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಗಿರೀಶ್ ಮಾತನಾಡಿ, ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗುವ ಕೆಲವು ಗ್ರಾಮಗಳನ್ನು ಪಟ್ಟಿ ಮಾಡಲಾಗಿದ್ದು, ಅಲ್ಲಿಯ ಪಿಡಿಒಗಳು ಹೆಚ್ಚು ಆಸಕ್ತಿ ವಹಿಸಿ ಪರ್ಯಾಯ ವ್ಯವಸ್ಥೆಗೆ ಸಹಕರಿಸಬೇಕು ಎಂದು ತಿಳಿಸಿದರು.

ಬೇಸಿಗೆಯಲ್ಲಿಯೇ ಹೆಚ್ಚು ಜಾತ್ರೆಗಳು ಇರುವುದರಿಂದ ಜನಸಂಖ್ಯೆಯೂ ಅಧಿಕವಾಗಿರುತ್ತದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಮುಂಜಾಗ್ರತೆಯಾಗಿ ಸಮರ್ಪಕವಾಗಿ ನೀರಿನ ವಿತರಣೆ ಮಾಡಬೇಕು ಎಂದು ಸಲಹೆ ನೀಡಿದರು.

ತಾಪಂ ಅಧಿಕಾರಿಗಳು, ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಾಟರ್ ಮ್ಯಾನ್​ಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net