ವಸ್ತು ಪ್ರದರ್ಶನ, ಮಾರಾಟ ಮೇಳ ಇಂದಿನಿಂದ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಸ್ವಾತಂತ್ರ್ಯ ದಿನಾಚರಣೆ, ರಕ್ಷಾ ಬಂಧನ ಹಾಗೂ ವರ ಮಹಾಲಕ್ಷ್ಮೀ ಹಬ್ಬದ ನಿಮಿತ್ತ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ (ಎನ್​ಆರ್​ಎಲ್​ಎಂ) ಗ್ರಾಮೀಣ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದಿಸುವ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆ. 13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ವರೆಗೆ ಜಿಪಂ ಕಚೇರಿ ಆವರಣದಲ್ಲಿ ಆಯೋಸಲಾಗಿದೆ.
ಮೇಳದಲ್ಲಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ತಯಾರಿಸಿದ ವಿವಿಧ ತರಹದ ಉಂಡೆ, ಬಗೆ ಬಗೆಯ ತಿನಿಸುಗಳು, ಬಟ್ಟೆಗಳು, ಅಲಂಕಾರಿಕ ವಸ್ತುಗಳ, ವಿವಿಧ ತರಹದ ರಾಖಿ ಮಳಿಗೆಗಳನ್ನು ಒಳಗೊಂಡ ವಸ್ತು ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಜನರು ಇದರ ಸದುಪಯೋಗ ಪಡೆಯಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net