

ಹುಬ್ಬಳ್ಳಿ : ಹುಬ್ಬಳ್ಳಿ ಮತ್ತು ಬೆಂಗಳೂರು ಮಧ್ಯೆ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ.
ಶ್ರೀ ಸಿದ್ಧರೂಢ ಸ್ವಾಮಿಜಿ ಹುಬ್ಬಳ್ಳಿ ನಿಲ್ದಾಣದಿಂದ ಕೆಎಸ್ಆರ್ ಬೆಂಗಳೂರು ನಿಲ್ದಾಣದವರೆಗೆ ನಿತ್ಯ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವ ಜೂನ್ 30ರವರೆಗೆ ಮಾತ್ರ ಕಾರ್ಯನಿರ್ವಹಿಸಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು. ಆದರೆ, ಈ ರೈಲಿನ ಸೇವೆಯನ್ನು ಇದೀಗ ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ನಿಲ್ದಾಣದಿಂದ ಎಸ್ಎಸ್ಎಸ್ ಹುಬ್ಬಳ್ಳಿಯವರೆಗೆ ತ್ಯ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರದ ಅವಧಿಯನ್ನು ಸಹ ವಿಸ್ತರಿಸಲಾಗಿದೆ. ಈ ರೈಲು ಈ ಮೊದಲು ಜುಲೈ 1ರವರೆಗೆ ಮಾತ್ರ ಸಂಚರಿಸಬೇಕಿತ್ತು. ಆದರೆ, ಇದೀಗ ಈ ಸೇವೆಯು 2026ರ ಜನವರಿ 1ರವರೆಗೆ ಮುಂದುವರಿಯಲಿದೆ ಎಂದು ನೈಋತ್ಯ ರೈಲ್ವೆ ವಲಯದ ಕಚೇರಿ ಪ್ರಕಟಣೆ ತಿಳಿಸಿದೆ.