ಸೆ.9ರಿಂದ 13ರವರೆಗೆ ಜಿಲ್ಲೆಯಲ್ಲಿ ಸಾಧಾರಣ ಮಳೆ ನಿರೀಕ್ಷೆ: ಭಾರತೀಯ ಹವಾಮಾನ ಇಲಾಖೆ ಮಾಹಿತಿ

istockphoto-1257951336-612x612
Transparent umbrella under heavy rain against water drops splash background. Rainy weather concept.
Published on

ಮಂಡ್ಯ: ಜಿಲ್ಲೆಯ ಕೆಲವೆಡೆ ಗುರುವಾರ ಹಾಗೂ ಶುಕ್ರವಾರ ಕೆಲವೊತ್ತು ಜೋರು ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗೆ ಕೊಂಚ ಪೂರಕವಾದಂತಾಗಿದೆ.

ಮದ್ದೂರು, ನಾಗಮಂಗಲ, ಶ್ರೀರಂಗಪಟ್ಟಣ, ಪಾಂಡವಪುರ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ನಾಟಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದ ರೈತರಿಗೆ ಅನುಕೂಲವಾಗಿದೆ. ಈ ಪೈಕಿ ಮದ್ದೂರು ತಾಲೂಕು ಗಡಿ ಅಂದರೆ ಕೌಡ್ಲೆ ಭಾಗದಲ್ಲಿ ಜೋರು ಮಳೆ ಸುರಿದ ಪರಿಣಾಮ ಕೆಲ ವಿದ್ಯುತ್ ಕಂಬಗಳು ಧರೆಗುರುಳಿವೆ.

ಇನ್ನು ಸೆ.9ರಿಂದ 13ರವರೆಗೆ ಜಿಲ್ಲೆಯಲ್ಲಿ ತುಂತುರುವಿನಿಂದ ಕೂಡಿದ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಗರಿಷ್ಟ 32 ಡಿಗ್ರಿ ಹಾಗೂ ಕನಿಷ್ಟ 21 ರಿಂದ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಪ್ರತಿ ಗಂಟೆಗೆ ಗಾಳಿಯು 4 ರಿಂದ 6 ಕಿ.ಮೀ ವೇಗದಲ್ಲಿ ಬೀಸಲಿದೆ. ಅಂತೆಯೇ ದೀರ್ಘಾವಧಿ ಹವಾಮಾನ ಮುನ್ಸೂಚನೆ ಪ್ರಕಾರ ಸೆ.15ರಿಂದ 21ರವರೆಗೆ ಸರಾಸರಿಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net