ನ.4ರಿಂದ 8ರವರೆಗೆ ಜಿಲ್ಲೆಯಲ್ಲಿ ಮಳೆ ನಿರೀಕ್ಷೆ: ಭಾರತೀಯ ಹವಾಮಾನ ಇಲಾಖೆ ಮಾಹಿತಿ

rain
Published on

ಮಂಡ್ಯ: ಜಿಲ್ಲೆಯಲ್ಲಿ ನ.4ರಿಂದ 8ರವರೆಗೆ ತುಂತುರುವಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

4ರಂದು 4 ಮಿ.ಮೀ, 5ರಂದು 15 ಮಿ.ಮೀ, 6 ಮತ್ತು 7ರಂದು 5 ಮಿ.ಮೀ ಹಾಗೂ 8ರಂದು 4 ಮಿ.ಮೀ ಮಳೆಯಾಗಬಹುದು. ಈ ಅವಧಿಯಲ್ಲಿ ಗರಿಷ್ಟ 32 ಹಾಗೂ ಕನಿಷ್ಟ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಗಾಳಿಯು ಪ್ರತಿ ಗಂಟೆಗೆ 2 ರಿಂದ 5 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net