

ಮಂಗಳೂರು : ಎಕ್ಸ್‌ಪರ್ಟ್ ಕಾಲೇಜು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಶೈಕ್ಷಣಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಐಡಿಯಲ್ ಐಸ್‌ಕ್ರೀಮ್ ಸಂಸ್ಥೆಯ ಆಡಳಿತ ನಿರ್ದೇಶಕ ಮುಕುಂದ್ ಕಾಮತ್ ಹೇಳಿದರು.
ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ‘ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪೂರ್ತಿ ನೀಡುವ ಮೂಲಕ ಉತ್ಕೃಷ್ಟ ಮಟ್ಟದ ಅಂಕ ಪಡೆದು ಸಾಧನೆ ಮಾಡಲು ಸಾಧ್ಯ .ಈ ನಿಟ್ಟಿನಲ್ಲಿ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ತನ್ನನ್ನು ತೊಡಗಿಸಿಕೊಂಡಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ ಎಂದರು.
ಸಮಾರೋಪ ಸಮಾರಂಭದಲ್ಲಿ ಮಂಗಳೂರಿನ ಚಾಂಪಿಯನ್ ಪ್ರೊ ಬಾಕ್ಸರ್ ಕಾರ್ತಿಕ್ ಪುತ್ರನ್ ಮುಖ್ಯ ಅತಿಥಿಯಾಗಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಪ್ರೊ.ನರೇಂದ್ರ ಎಲ್.ನಾಯಕ್ ವಹಿಸಿದ್ದರು. ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್ ನಾಯಕ್, ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್ ನಾಯಕ್, ವಾಸ್ತುಶಿಲ್ಪತಜ್ಞೆ ದೀಪಿಕಾ ಎ. ನಾಯಕ್, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ, ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್ ಉಪಸ್ಥಿತರಿದ್ಧರು.
ವಾರ್ಷಿಕ ಕ್ರೀಡೋತ್ಸವದಲ್ಲಿ ಹುಡುಗಿಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಶೈನಾ ಮೆಲೋರಾ ರೆಬೆಲ್ಲೊ, ಹುಡುಗರ ವಿಭಾಗದಲ್ಲಿ ಸೋಹಾನ್ ಸತೀಶ್ ನಾಯ್ಕ ಪಡೆದರು. ಸಮಗ್ರ ಪ್ರಶಸ್ತಿಯನ್ನು ದ್ವಿತೀಯ ಪಿಯುಸಿ ಸಿ ವಿಭಾಗದ ವಿದ್ಯಾರ್ಥಿಗಳು ಪಡೆದರು.
ಕ್ರೀಡಾ ಸಂಯೋಜಕ ಪ್ರಮೋದ್ ಕಿಣಿ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕಿ ಝೀಟಾ ಡಿಸೋಜ ಮತ್ತು ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಉಜ್ವಲ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.