ಅನ್ಯ ಕೆಲಸಗಳಿಗೆ ಅನುದಾನ ದುರ್ಬಳಕೆ

IMG-20231214-WA0136
Published on

ಪಾಂಡವಪುರ: ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿರುವ ಅನುದಾನವನ್ನು ಅನ್ಯ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಶೋಷಿತರು ಹಾಗೂ ಸಾಮಾಜಿಕ ಕಾರ್ಯಕರ್ತರ ಸಮಿತಿ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿ ಮುತ್ತಿಗೆ ಹಾಕಿ ಗುರುವಾರ ಪ್ರತಿಭಟನೆ ನಡೆಸಿದರು.

ಲೋಕೋಪಯೋಗಿ ಇಲಾಖೆಯಲ್ಲಿ 2017 ರಿಂದ 2023 ರವರೆಗೆ ಎಸ್‌ಸಿಸಿಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಬಗ್ಗೆ ವಿವರ ಪಡೆದು ಪರಿಶೀಲಿಸಿದಾಗ ಆ ಸ್ಥಳದಲ್ಲಿ ಯಾವುದೇ ಕಾಮಗಾರಿ ನಡದೇ ಇಲ್ಲ. ಅಧಿಕಾರಿಗಳು ಈ ಅನುದಾನವನ್ನು ಬೇರೆಡೆಗೆ ವಿನಿಯೋಗಿಸಿರಬಹುದು ಎಂಬ ಅನುಮಾನ ಕಾಡುತ್ತಿದೆ. ಈ ಬಗ್ಗೆ ಸೂಕ್ತ ಮಾಹಿತಿ ಕೂಡ ನೀಡಿಲ್ಲ ಎಂದು ಆರೋಪಿಸಿದರು.
ಸಂಘಟನೆಯ ತಾಲೂಕು ಅಧ್ಯಕ್ಷ ಚಿಕ್ಕಾಡೆ ಮದನಕುಮಾರ್, ಉಪಾಧ್ಯಕ್ಷ ಚಂದ್ರೆ ಅಶ್ವತ್ಥ್, ಮಹದೇವು, ಮಹೇಶ, ಶ್ರೀನಾಥ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net