ಪಡಿತರ ಚೀಟಿ ತಿದ್ದುಪಡಿ ಕಾಲಾವಧಿ ವಿಸ್ತರಿಸಿ

Untitled design (5)
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಸಿಪಿಐಎಂಎಲ್ ರೆಡ್‌ಸ್ಟಾರ್‌ನಿಂದ ಸೋಮವಾರ ಮನವಿ ಸಲ್ಲಿಸಲಾಯಿತು. ಜಿಲ್ಲಾ ಸಮಿತಿ ಸದಸ್ಯರಾದ ಜಿ.ಅಮರೇಶ, ಅಜೀಜ್ ಜಾಗೀರದಾರ್, ಸೈಯದ್ ಅಬ್ಬಾಸ್ ಅಲಿ, ಅಡಿವೆಪ್ಪ, ಬದ್ರಿ ಇದ್ದರು.
Published on

ರಾಯಚೂರು:ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗಾಗಿ ಸರ್ವರ್ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತಿದ್ದುಪಡಿಗಾಗಿ ನಿಗದಿಪಡಿಸಿರುವ ಕಾಲಾವಧಿಯನ್ನು ವಿಸ್ತರಿಸಬೇಕು ಎಂದು ಸಿಪಿಐಎಂಎಲ್ ರೆಡ್‌ಸ್ಟಾರ್ ಒತ್ತಾಯಿಸಿದೆ.


ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಪಕ್ಷದ ಪ್ರಮುಖರು ಸೋಮವಾರ ಮನವಿ ಸಲ್ಲಿಸಿದರು. ಆ.18 ರಿಂದ 23ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಆದರೆ, ಮಧ್ಯಾಹ್ನ 12 ರಿಂದ 3ರವರೆಗೆ ಅರ್ಜಿ ಹಾಕಲು ಅವಕಾಶ ನೀಡಿದ್ದು ಸರಿಯಲ್ಲ ಎಂದು ದೂರಿದರು.


ಸರ್ವರ್ ಸಮಸ್ಯೆಯಿಂದ ಪಡಿತರ ಚೀಟಿ ತಿದ್ದುಪಡಿ ಸಾಧ್ಯವಾಗುತ್ತಿಲ್ಲ. ಬಡವರು, ಕೂಲಿ ಕಾರ್ಮಿಕರು ಕೆಲಸ ಬಿಟ್ಟು ಸೈಬರ್ ಕೇಂದ್ರಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ. ಇದರಿಂದ ದುಡಿಮೆಗೆ ಸಮಸ್ಯೆಯಾಗಿದೆ. ಕಾರಣ ಪಡಿತರ ಚೀಟಿ ತಿದ್ದುಪಡಿ ದಿನಾಂಕವನ್ನು ಒಂದು ವಾರ ವಿಸ್ತರಣೆ ಮಾಡಬೇಕು.

ತಿದ್ದುಪಡಿ ಅರ್ಜಿ ಹಾಕಲು ದಿನದ 24 ಗಂಟೆ ಅವಕಾಶ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಸರ್ವರ್ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಸೈಬರ್ ಕೇಂದ್ರಗಳಲ್ಲಿ ಹಣ ಸುಲಿಗೆ ನಿಲ್ಲಿಸಬೇಕು ಎಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net