ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ 1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ- ಸ್ನಾತಕೋತ್ತರ ಪದವಿಗಳ ಕೋರ್ಸ್ ಓದುತ್ತ್ತಿರುವವರಿಗೆ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸುವಂತೆ ಮನವಿ ಸಲ್ಲಿಕೆಯಾಗಿತ್ತು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2025ರ ಫೆ. 15ರವರೆಗೆ ಅವಽ ವಿಸ್ತರಿಸಲಾಗಿದೆ. ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲೂಕು ಕಚೇರಿ ಅಥವಾ bcwdhelpline@gmail.com ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net