ಹಾಸ್ಟೆಲ್‌ಗೆ ಪ್ರವೇಶಾತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Bhumi Pooja of Civic Facility Hostel
Published on

ಮಂಡ್ಯ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಆನ್‌ಲೈನ್ ತಂತ್ರಾಂಶ https://shp.karnataka.gov.in/bcwd ಮೂಲಕ ಅ.14ರೊಳಗೆ ಅರ್ಜಿ ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ನಲ್ಲಿ ನೋಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net