ಆ.6ರವರೆಗೆ 5 ತಾಲೂಕುಗಳಲ್ಲಿ ನಿಷೇಧಾಜ್ಞೆ ವಿಸ್ತರಣೆ

checking
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಜು.27ರಿಂದ 29ರವರೆಗೆ ಹೊರಡಿಸಲಾಗಿದ್ದ 144 ಕಲಂ ನಿಷೇಧಾಜ್ಞೆಯನ್ನು ಆ.6ರ ಮಧ್ಯರಾತ್ರಿಯವರಿಗೆ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ ಪರಿಸ್ಥಿತಿ ತಿಳಿಯಾಗದೇ ಇದ್ದುದರಿಂದ ಈ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net