

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ- 1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾ. 10ರವರೆಗೆ ವಿಸ್ತರಿಸಲಾಗಿದೆ. ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಸಂಪರ್ಕಿಸಬೇಕು ಪ್ರಕಟಣೆ ತಿಳಿಸಿದೆ.