

ವಿಜಯಪುರ : ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನೋಂದಣಿ ಅವಧಿ ಏ. 25 ರವರೆಗೆ ಹಾಗೂ ಖರೀದಿ ಅವಧಿಯನ್ನು ಮೇ. 1 ರವರೆಗೆ ವಿಸ್ತರಣೆ ಮಾಡಲಾಗಿದೆ.
2024&25ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ಗೆ 7,550 ರೂಗಳ ಜತೆಗೆ, ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಪ್ರತಿ ಕ್ವಿಂಟಾಲಿಗೆ 450 ರೂಗಳ ಸೇರಿದಂತೆ 8,000 ರೂಗಳನ್ನು ಪ್ರತಿ ಕ್ವಿಂಟಾಲಿಗೆ ನಿಗದಿಪಡಿಸಲಾಗಿದೆ.
ಜಿಲ್ಲೆಯ ರೈತರು ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ, ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಅಧ್ಯಕ್ಷರೂ ಆದ ಟಿ. ಭೂಬಾಲನ್ ತಿಳಿಸಿದ್ದಾರೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.