

ಮೈಸೂರು: ಪ್ರಸಕ್ತ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ವಾರ್ಷಿಕ ವರಮಾನ ರೂ. 2.5 ಲಕ್ಷದೊಳಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಪಡೆಯಲು www.sw.kar.nic.in ಮೂಲಕ ಅರ್ಜಿ ಸಲ್ಲಿಸಲು ಫೆ.20 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಿದ ನಂತರ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ರವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:0821-2520910 ಸಂಪರ್ಕಿಸಬಹುದು ಎಂದು ಮೈಸೂರು ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.