ವಿದ್ಯಾರ್ಥಿನಿಲಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Adarsha Shakshaka Prashasti Application
Published on

ಮೈಸೂರು:ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ ದಿನಾಂಕವನ್ನು ವಿಸ್ತರಿಸಲಾಗಿದೆ.

ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಗಳ (ವಾರ್ಷಿಕ ಆದಾಯ ಮಿತಿ 2.50 ಲಕ್ಷ) ಹಾಗೂ ಪ್ರವರ್ಗ-2, 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳು (ವಾರ್ಷಿಕ ಆದಾಯ ಮಿತಿ 1 ಲಕ್ಷ) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ. 29 ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೊಂದಿಗೆ ಸಂಬoಧಿಸಿದ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದೆoದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net