

ಮಂಗಳೂರು : ಪ್ರಯಾಣಿಕರ ದಟ್ಟಣೆ ನಿವಾರಿಸಲು ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ಮಾವೇಲಿ ಎಕ್ಸ್‌ಪ್ರೆಸ್ ರೈಲಿಗೆ (ನಂ.16604) ಮೇ 23 ರಿಂದ 27ರವರೆಗೆ ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಹಾಗೂ ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೆಂಟ್ರಲ್ ಮಾವೇಲಿ ಎಕ್ಸ್‌ಪ್ರೆಸ್ (ನಂ.16603)ರೈಲಿಗೆ ಮೇ 22 ರಿಂದ 26 ರವರೆಗೆ ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಅಳವಡಿಸಲಾಗುವುದು.
ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ಮಲಬಾರ್ ಎಕ್ಸ್‌ಪ್ರೆಸ್ ರೈಲಿಗೆ (ನಂ.16629) ಮೇ 23 ರಿಂದ 26ರವರೆಗೆ
ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಹಾಗೂ ಮಂಗಳೂರು ಸೆಂಟ್ರಲ್ -ತಿರುವನಂತಪುರಂ ಸೆಂಟ್ರಲ್ ಮಲಬಾರ್ ಎಕ್ಸ್‌ಪ್ರೆಸ್ ರೈಲಿಗೆ (ನಂ.16630) ಮೇ 22 ರಿಂದ 25ರವರೆಗೆ ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಅಳವಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.