ಮಾವೇಲಿ ಮತ್ತು ಮಲಬಾರ್‌ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ಬೋಗಿ ಅಳವಡಿಕೆ

download
Published on


ಮಂಗಳೂರು : ಪ್ರಯಾಣಿಕರ ದಟ್ಟಣೆ ನಿವಾರಿಸಲು ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ಮಾವೇಲಿ ಎಕ್ಸ್‌ಪ್ರೆಸ್ ರೈಲಿಗೆ (ನಂ.16604) ಜೂ.8 ಮತ್ತು 9 ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಹಾಗೂ ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೆಂಟ್ರಲ್ ಮಾವೇಲಿ ಎಕ್ಸ್‌ಪ್ರೆಸ್ (ನಂ.16603)ರೈಲಿಗೆ ಜೂ.7 ಮತ್ತು 8ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಅಳವಡಿಸಲಾಗುವುದು.
ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ಮಲಬಾರ್ ಎಕ್ಸ್‌ಪ್ರೆಸ್ ರೈಲಿಗೆ (ನಂ.16629) ಜೂ. 7,8 ಮತ್ತು 9ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಹಾಗೂ ಮಂಗಳೂರು ಸೆಂಟ್ರಲ್ -ತಿರುವನಂತಪುರಂ ಸೆಂಟ್ರಲ್ ಮಲಬಾರ್ ಎಕ್ಸ್‌ಪ್ರೆಸ್ ರೈಲಿಗೆ (ನಂ.16630) ಜೂ.6,7 ಮತ್ತು 8ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಅಳವಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
..........................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net