

ಮಂಗಳೂರು : ಪ್ರಯಾಣಿಕರ ದಟ್ಟಣೆ ನಿವಾರಿಸಲು ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ಮಾವೇಲಿ ಎಕ್ಸ್‌ಪ್ರೆಸ್ ರೈಲಿಗೆ (ನಂ.16604) ಜೂ. 20, 21 ಮತ್ತು 23ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಹಾಗೂ ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೆಂಟ್ರಲ್ ಮಾವೇಲಿ ಎಕ್ಸ್‌ಪ್ರೆಸ್ (ನಂ.16603)ರೈಲಿಗೆ ಜೂ.19,20 ಮತ್ತು 22ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಅಳವಡಿಸಲಾಗುವುದು.
ತಿರುವನಂತಪುರಂ ಸೆಂಟ್ರಲ್-ಮಂಗಳೂರು ಸೆಂಟ್ರಲ್ ಮಲಬಾರ್ ಎಕ್ಸ್‌ಪ್ರೆಸ್ ರೈಲಿಗೆ (ನಂ.16629) ಜೂ.21 ಮತ್ತು 23 ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಹಾಗೂ ಮಂಗಳೂರು ಸೆಂಟ್ರಲ್ -ತಿರುವನಂತಪುರಂ ಸೆಂಟ್ರಲ್ ಮಲಬಾರ್ ಎಕ್ಸ್‌ಪ್ರೆಸ್ ರೈಲಿಗೆ (ನಂ.16630) ಜೂ.20 ಮತ್ತು 22 ರಂದು ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಅಳವಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.