ಪಠ್ಯೇತರ ಚಟುವಟಿಕೆಗೂ ಪ್ರೋತ್ಸಾಹ

spp
ವಾಲಿಬಾಲ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮೆಣಸೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳು. ಶಿಕ್ಷಕರಾದ ಪುಷ್ಪ್ಪಾ, ಉಮೇಶ್, ಶಾಂತಾ, ತ್ರಿಮೂರ್ತಿ ಇತರರಿದ್ದರು.
Published on

ಶೃಂಗೇರಿ: ಕ್ಷೇತ್ರದ ಶಾಸಕರ ಮಾದರಿ ಶಾಲೆಯಲ್ಲಿ ಪಠ್ಯದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗೂ ಪ್ರೋತ್ಸಾಹ, ತರಬೇತಿ ನೀಡಲಾಗುತ್ತಿದೆ ಎಂದು ಮೆಣಸೆ ಗ್ರಾಪಂ ಅಧ್ಯಕ್ಷೆ ಸಂಧ್ಯಾ ಮರಿಯಪ್ಪ ನಾಯ್ಕ ಹೇಳಿದರು.

ವಾಲಿಬಾಲ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮೆಣಸೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಶನಿವಾರ ಅಭಿನಂದಿಸಿ ಮಾತನಾಡಿದರು.
ಶಾಸಕ ಟಿ.ಡಿ.ರಾಜೇಗೌಡ ಅವರ ಸಹಕಾರದಿಂದ ಐದು ವರ್ಷದಲ್ಲಿ ಮೆಣಸೆ ಶಾಲೆ ಚಿತ್ರಣವೇ ಬದಲಾಗಿದೆ. ಬಹುತೇಕ ಸೌಲಭ್ಯ ನೀಡಲಾಗಿದೆ. ಶಿಕ್ಷಕರ ಕೊರತೆ ಇರುವುದರಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಮುಖ್ಯ ಶಿಕ್ಷಕರು ಕ್ರಮ ಕೈಗೊಂಡಿದ್ದಾರೆ. ಖಾಸಗಿ ಶಾಲೆಗಳಿಗಿಂತ ಉತ್ತಮ ಸೌಲಭ್ಯ ನೀಡಲಾಗಿದೆ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಉದಯ್ ಮಾತನಾಡಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸಿದ್ದರಾಜು ಮಾರ್ಗದರ್ಶನದಲ್ಲಿ ಶಿಕ್ಷಕರಾದ ಜಯಂತಿ, ಪುಷ್ಪಾ, ಅನಿತಾ, ಧನಲಕ್ಷ್ಮೀ, ಉಮೇಶ್, ಮಮತಾ, ಮೇಘನಾ, ಶಾಂತಾ ವಾಲಿಬಾಲ್ ಕ್ರೀಡೆಯಲ್ಲಿ ತರಬೇತಿ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವಂತೆ ಮಾಡಿದ್ದಾರೆ ಎಂದರು. ಮೆಣಸೆ ಗ್ರಾಪಂ ಸದಸ್ಯರಾದ ತ್ರಿಮೂರ್ತಿ, ಸುಷ್ಮಾ ಸುರೇಂದಾಚಾರ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net