ಸರ್ವಾಂಗೀಣ ವಿಕಾಸಕ್ಕೆ ಪಠ್ಯೇತರ ಚಟುವಟಿಕೆ ಅವಶ್ಯ

Extracurricular activities are essential for all-round development.
ಗುಳೇದಗುಡ್ಡದ ನೆಹರು ಅಂತಾರಾಷ್ಟ್ರೀಯ ಸ್ಕೂಲ್‌ನಲ್ಲಿ ವಾರ್ಷಿಕ ಸ್ನೇಹಸಮ್ಮೇಳನಕ್ಕೆ ಬಾಗಲಕೋಟ ಕೃಷಿ ವಿವಿ ಉಪಕುಲಪತಿ ಡಾ.ವಿಷ್ಣುವರ್ಧನ ಚಾಲನೆ ನೀಡಿದರು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹೊಳಬಸು ಶೆಟ್ಟರ,ಲಕ್ಷ್ಮಿ ಬ್ಯಾಂಕ್ ಅಧ್ಯಕ್ಷ ರಾಜಶೇಖರ ಶೀಲವಂತ ಇತರರಿದ್ದಾರೆ.
Published on

ಗುಳೇದಗುಡ್ಡ: ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸರ್ವಾಂಗೀಣ ವಿಕಾಸ ಹೊಂದಲು ಸಾಧ್ಯ ಎಂದು ಬಾಗಲಕೋಟ ಕೃಷಿ ವಿವಿ ಉಪಕುಲಪತಿ ಡಾ.ವಿಷ್ಣುವರ್ಧನ ಹೇಳಿದರು.

ಪಟ್ಟಣದ ನೆಹರು ಅಂತಾರಾಷ್ಟ್ರೀಯ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹಸಮ್ಮೇಳನ ಕಲರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸ್ಪರ್ಧಿಸಿ ಗೆಲ್ಲುವಂತಾಗಲು ಶ್ರದ್ಧೆ, ಸಮಯ ಪ್ರಜ್ಞೆ, ನಿರಂತರ ಅಧ್ಯಯನದಲ್ಲಿ ತೊಡಗಿಕೊಂಡಿರಬೇಕು ಎಂದರು.

ಕೃಷಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಮಹದೇವ ಮುರಗಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದೊಂದಿಗೆ ಒಳ್ಳೆಯ ನಡತೆ ಕಲಿಸುವುದು ಅವಶ್ಯಕ. ಈ ನಿಟ್ಟಿನಲ್ಲಿ ಪಾಲಕರು ಮನೆಯಲ್ಲಿ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು ಎಂದರು.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹೊಳಬಸು ಶೆಟ್ಟರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಪಂ ಯೋಜನಾ ನಿರ್ದೇಶಕ ಡಾ.ಬಿ.ಆರ್. ಪುನಿತ, ಎಂ.ವಿವೇಕಾನಂದ, ಲಕ್ಷ್ಮಿ ಬ್ಯಾಂಕ್ ಅಧ್ಯಕ್ಷ ರಾಜಶೇಖರ ಶೀಲವಂತ, ಉಪಾಧ್ಯಕ್ಷ ಸಂಪತ್ತಕುಮಾರ ರಾಠಿ, ಶಾಲೆ ಅಧ್ಯಕ್ಷ ಮಹಾಂತಯ್ಯ ಸರಗಣಾಚಾರಿ, ಉಪಾಧ್ಯಕ್ಷ ವಿರೇಶ ಚಿಂದಿ, ಹೇಮಂತ ಟಗರಿ, ಪ್ರಾಚಾರ್ಯ ಮುತ್ತುರಾಜ ಕುಬಕಡ್ಡಿ, ಪ್ಯಾರಾ ಮೇಡಿಕಲ್ ಕಾಲೇಜಿನ ಪ್ರಾಚಾರ್ಯ ಶಿವಾನಂದ ಯರಗಲ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net