ಪಠ್ಯೇತರ ಚಟುವಟಿಕೆ ಸಮಗ್ರ ಅಭಿವೃದ್ಧಿಗೆ ಅಗತ್ಯ

prize
Published on

ಗಂಗೊಳ್ಳಿ: ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭ ಶನಿವಾರ ನಡೆಯಿತು.

ಲೇಖಕಿ, ಭಂಡಾರ್ಕಾರ್ಸ್ ಕಾಲೇಜು ನಿವೃತ್ತ ಪ್ರಾಧ್ಯಾಪಕಿ ಡಾ.ಪಾರ್ವತಿ ಜಿ.ಐತಾಳ್ ವಿಜೇತರಿಗೆ ಬಹುಮಾನ ವಿತರಿಸಿ, ಮಾತೃಭಾಷೆ ಹಾಗೂ ಆಂಗ್ಲ ಭಾಷೆ ಮಹತ್ವ ತಿಳಿಸಿದರು. ನಾಲ್ಕು ಗೋಡೆಗಳ ನಡುವೆ ಕಲಿಯುವುದಷ್ಟೇ ಶಿಕ್ಷಣವಲ್ಲ. ಪಠ್ಯಪುಸ್ತಕಗಳ ಜತೆಗೆ ಪಠ್ಯೇತರ ಚಟುವಟಿಕೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಅವಶ್ಯಕವಾಗಿದೆ. ಬಹುಮಾನ ಗಳಿಸುವುದೇ ಮುಖ್ಯವಲ್ಲ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವುದು ಮುಖ್ಯವಾಗುತ್ತದೆ. ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಸಾಧನೆಯ ಪಥದಲ್ಲಿ ಸಾಗಲು ಪೂರಕವಾಗಿದೆ ಎಂದರು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ, ಶಾಲಾ ಪ್ರಾಂಶುಪಾಲ ಶರಣ ಕುಮಾರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಂ., ಮುಖ್ಯ ಶಿಕ್ಷಕಿ ಸುಜಾತಾ ಸದಾರಾಮ್,ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಕಿ ಜ್ಯೋತಿ ಸ್ವಾಗತಿಸಿದರು. ಶಿಕ್ಷಕಿಯರಾದ ಸುಪ್ರಿಯಾ, ಸುಮಿತ್ರಾ ಶುಭಾ, ಅನುರಾಧಾ ವಿಜೇತರ ಪಟ್ಟಿ ವಾಚಿಸಿದರು. ಶಿಕ್ಷಕಿ ರೂಪಾಮಣಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net