ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆ ಪೂರಕ

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆ ಪೂರಕ
Published on

ಬೇಲೂರು: ಮಕ್ಕಳ ದಿನಾಚರಣೆ ಅಂಗವಾಗಿ ಪಟ್ಟಣ ಸಮೀಪದ ಯುನೈಟೆಡ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಮಕ್ಕಳಿಗಾಗಿ ವೇಷ ಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಯುನೈಟೆಡ್ ಅಕಾಡೆಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಚ್.ಎಂ.ದಿನೇಶ್, ಇತ್ತೀಚಿನ ದಿನಗಳಲ್ಲಿ ಪುಸ್ತಕ ಓದಿ ಹೆಚ್ಚು ಅಂಕ ಗಳಿಸುವುದೇ ಎಲ್ಲರೂ ಗುರಿಯಾಗಿಸಿಕೊಂಡಿದ್ದಾರೆ. ಆದರೆ, ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಮಾಡಿದರೆ ಮಕ್ಕಳ ಸರ್ವತೋಮುಖ ಪ್ರಗತಿಗೆ ಪೂರಕವಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳಿಗಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ವೇಷಭೂಷಣ ಸ್ಪರ್ಧೆಯಲ್ಲಿ 350ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಜಾನಪದ, ಪುರಾಣ, ಅಧ್ಯಾತ್ಮ, ಇತಿಹಾಸ, ಪ್ರಾಕೃತಿಕ ಹಾಗೂ ಶಿಶು ಸಾಹಿತ್ಯಗಳಿಂದ ಆಯ್ದುಕೊಂಡ ವಿವಿಧ ಪಾತ್ರಗಳ ಮೂಲಕ ಅಭಿನಯಿಸಿದರು.

ಸಂಸ್ಥೆಯ ಖಜಾಂಚಿ ಸಿ.ಎಚ್.ಲೋಕೇಶ್, ಮುಖ್ಯ ಶಿಕ್ಷಕರಾದ ಎಂ.ಎನ್.ದೀಪಾ, ಅಸ್ಮ, ರಘುರಾಮ್, ಪ್ರೀತಿ, ಭಾಗ್ಯ, ರಂಗನಾಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net