ಮಕ್ಕಳ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಮುಖ್ಯ

8
Published on

ಮಕ್ಕಳ ಬೆಳವಣಿಗೆಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆ ಮುಖ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪ ನಿರ್ದೇಶಕ ಎಚ್.ಕೆ.ಪಾಂಡು ಹೇಳಿದರು.

ಕಲಾಮಂದಿರದ ಸುಚಿತ್ರಾ ಕಲಾ ಗ್ಯಾಲರಿಯಲ್ಲಿ ಆಯೋಜಿಸಿದ್ದ ‘ಚಿಣ್ಣರ ಕಲಾಬಿಂಬ’ ಶೀರ್ಷಿಕೆಯ ಶಾಲಾ ಮಕ್ಕಳ ಭಾರತೀಯ ಜಾನಪದ ಕಲೆಗಳ ಚಿತ್ರಕಲಾ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರ ತೆಗೆಯಲು ಚಿತ್ರಕಲೆ, ಸಂಗೀತ, ದೈಹಿಕ ಶಿಕ್ಷಣ ಶಿಕ್ಷಕರು ಬೇಕಾಗುತ್ತದೆ. ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕಿ ಕೆ.ಸಂಗೀತಾ ಅವರು ಬೇರೆ ಶಾಲೆಯ ವಿದ್ಯಾರ್ಥಿಗಳಿಗೂ ಚಿತ್ರಗಳನ್ನು ರಚಿಸುವುದನ್ನು ಹೇಳಿಕೊಡಬೇಕು ಎಂದು ಮನವಿ ಮಾಡಿದರು.
ಪ್ರದರ್ಶನಕ್ಕೆ ಚಾಲನೆ ನೀಡಿದ ಪತ್ರಕರ್ತೆ ರಶ್ಮಿ ಕೋಟಿ ಮಾತನಾಡಿ, ಇಂದು ಶಿಕ್ಷಣ ಮೌಲ್ಯ ಕಳೆದುಕೊಂಡಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಹಣ ವಸೂಲಿ ಮಾಡುವ ಸಂಸ್ಥೆಯಾಗಿ ಮಾರ್ಪಟ್ಟಿವೆ. ಇಂತಹ ಸನ್ನಿವೇಶದ ನಡುವೆಯೂ ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾರತದ 31 ರಾಜ್ಯಗಳ ವಿವಿಧ ಜಾನಪದ ಕಲೆಗಳ ಚಿತ್ರಗಳನ್ನು ರಚಿಸಿ ಪ್ರದರ್ಶನ ಮಾಡುತ್ತಿರುವುದು ಸಂತಸದ ಸಂಗತಿ ಎಂದರು.

ಮೈಸೂರು ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಬಿ.ಮಂಜುನಾಥ್, ಕಲಾವಿದ ರಾಜೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net