ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ

19-DVD-1
ಇಂಗಳದಾಳ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಕಲಿಕಾ ಹಬ್ಬದಲ್ಲಿ ವಿದ್ಯಾರ್ಥಿಗಳು ವಿವಿಧ ವೇಷತೊಟ್ಟು ಗಮನ ಸೆಳೆದರು.
Published on

ದೇವದುರ್ಗ: ಶಿಕ್ಷಕರು ಪಠ್ಯ ಮಾತ್ರವಲ್ಲ ಪಠ್ಯೇತರ ವಿಷಯದಲ್ಲಿ ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ ಪೂಜಾರಿ ಹೇಳಿದರು.

ತಾಲೂಕಿನ ಇಂಗಳದಾಳ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸುಂಕೇಶ್ವರಹಾಳ ಸಮೂಹ ಸಂಪನ್ಮೂಲ ಕೇಂದ್ರದಿಂದ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ಮಕ್ಕಳಿಗೆ ಪುಸ್ತಕ ಜ್ಞಾನದ ಜತೆಗೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ,

ವ್ಯವಹಾರ ಜ್ಞಾನ ಬೆಳೆಸುವ ದೃಷ್ಟಿಯಿಂದ ಪಠ್ಯೇತರ ಚಟುವಟಿಕೆ ಆಯೋಜಿಸಲಾಗಿದೆ. ಕ್ರೀಡಾಕೂಟ, ಪ್ರತಿಭಾ ಕಾರಂಜಿ, ಕಲಿಕೋತ್ಸವ, ಕಲಿಕಾ ಹಬ್ಬದಂತ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಕರು ಸದಾ ಬೆನ್ನೆಲುಬಾಗಿ ನಿಲ್ಲಬೇಕು ಎಂದರು.

ಮುಖ್ಯಶಿಕ್ಷಕ ಶ್ರೀರಾಮ ಮಾತನಾಡಿ, ಪಾಲಕರು ಮಕ್ಕಳನ್ನು ಕೇವಲ ಅಕ್ಷರದ ಹುಳು ಮಾಡದೆ, ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳೆಯಲು ಅವಕಾಶ ಕಲ್ಪಿಸಬೇಕು. ಸಂಗೀತ, ಸಾಹಿತ್ಯ, ಕಲೆ, ಕ್ರೀಡೆಯಲ್ಲಿ ಮಕ್ಕಳಿಗೆ ಪ್ರತಿಭೆ ಇದ್ದರೆ ಪ್ರೋತ್ಸಾಹ ನೀಡಬೇಕು ಎಂದರು.

ಶಿಕ್ಷಣ ಇಲಾಖೆ ಅಧಿಕಾರಿಗಳಾದ ಶರಣಪ್ಪ, ವೆಂಕಟಾಚಲಪತಿ, ಎಸ್ಡಿಎಂಸಿ ಅಧ್ಯಕ್ಷ ರಾಮಪ್ಪ, ಸಿಆರ್‌ಪಿಗಳಾದ ವೆಂಕಟಾಂಜನೇಯ, ಅಂಬಣ್ಣ ಮುದಾಳೆ, ಹದ್ದಿನಾಳ ಶಾಲೆ ಮುಖ್ಯಶಿಕ್ಷಕ ಚಂದ್ರಹಾಸ, ಬಸನಗೌಡ, ಪ್ರಭಾಕರ ಪಾಟೀಲ್, ಬೂದಯ್ಯಸ್ವಾಮಿ, ಪ್ರಭಾಕರಸ್ವಾಮಿ, ಶಿಕ್ಷಕಿ ವಿಜಯಲಕ್ಷ್ಮೀ, ಬನ್ನಪ್ಪಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net