ಆರಗ ಜ್ಞಾನೇಂದ್ರ ವಿರುದ್ಧ ತೀವ್ರ ಆಕ್ರೋಶ, ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

CONGRESS KHARGE
ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಶಾಸಕ ವಿಠಲ ಕಟಕಧೋಂಡ, ರಮೇಶ ಗುಬ್ಬೇವಾಡ, ಚಾಂದಸಾಬ ಗಡಗಲಾವ ಮತ್ತಿತರರಿದ್ದಾರೆ.
Published on

ವಿಜಯಪುರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅಸಂವಿಧಾನಿಕ ಪದ ಬಳಸಿ ನಿಂದಿಸಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಘೋಷಣೆ ಕೂಗಿದ ಪದಾಧಿಕಾರಿಗಳು ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪರಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ಮಾತನಾಡಿ, ಆರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣದ ಕುರಿತು ನಿಂದಿಸಿದ್ದಾರೆ. ಇದು ಅವರ ಮನಃಸ್ಥಿತಿಯನ್ನು ಅನಾವರಣಗೊಳಿಸುತ್ತದೆ. ಇಂಥ ದುಷ್ಟ ಮನಃಸ್ಥಿತಿಯನ್ನು ಖಂಡಿಸುವುದಾಗಿ ತಿಳಿಸಿದರಲ್ಲದೇ, ಆರಗ ಜ್ಞಾನೇಂದ್ರ ಮೇಲೆ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಒತ್ತಾಯಿಸಿದರು.

ಶಾಸಕ ವಿಠಲ ಕಟಕಧೋಂಡ ಮಾತನಾಡಿ, ಆರಗ ಜ್ಞಾನೇಂದ್ರ ಹಳೆಯ ವರ್ಣನೀತಿಯನ್ನು ಪುನರುಚ್ಚರಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಲ್ಲದೇ ಸಚಿವ ಈಶ್ವರ ಖಂಡ್ರೆ ಬಗ್ಗೆ ಲಗುವಾಗಿ ಮಾತನಾಡಿದ್ದಾರೆ. ಮನುವಾದಿ ಧೋರಣೆಯುಳ್ಳ ಆರಗ ಜ್ಞಾನೇಂದ್ರ ಮೇಲೆ ಕೂಡಲೇ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರೀಫ್, ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಸಾಹೇಬಗೌಡ ಬಿರಾದಾರ, ಭಾರತಿ ನಾವಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷ ಸಣ್ಣಪ್ಪ ತಳವಾರ, ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ, ರಾಜ್ಯ ಒಬಿಸಿ ಪ್ರಧಾನ ಕಾರ್ಯದರ್ಶಿ ಅಂಬಣ್ಣ ಕಲಮನಿ, ರಾಜೇಶ್ವರಿ ಚೋಳಕೆ, ಅಶ್ಪಾಕ ಮನಗೂಳಿ, ರಾಕೇಶ ಕಲ್ಲೂರ, ಸಂತೋಷ ಬಾಲಗಾಂವಿ, ಕೃಷ್ಣಾ ಚವ್ಹಾಣ, ಪರಸುರಾಮ ಹೊಸಮನಿ, ಭಾರತಿ ಹೊಸಮನಿ, ಹಬೀದಾ ಪಟೇಲ, ಅಸ್ಮಾ ಕಾಲೇಭಾಗ, ಮುಸ್ಕಾನ ಶಿವಣಗಿ, ಅಪ್ಪು ಪೂಜಾರಿ, ಚನ್ನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಬಾಬು ಯಾಳವಾರ, ತಾಜುದ್ದೀನ ಖಲೀಪಾ, ಎ.ಡಿ. ಬಡೆದರ, ಹಾಜಿ ಪಿಂಜಾರ, ಸಿದ್ದು ತೋಟದ, ಅಜಾಜ ಅಗಸಿಮನಿ, ಯುವರಾಜ ಬಜಂತ್ರಿ, ಮಹಾಂತೇಶ ಬಜಂತ್ರಿ, ಅಕ್ಬರ ಗೋಕಾವಿ, ದಸ್ತಗಿರಸಾಬ ಮುಳವಾಡ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net