

ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರದಲ್ಲಿ 422 ಮಂದಿ ಭಾಗವಹಿಸಿ, 132 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ನಡೆದ ಕಣ್ಣಿನ ಉಚಿತ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ರೋಟರಿ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಅಜೀಜ್ ಮಾತನಾಡಿ, ಕಣ್ಣಿನ ದೃಷ್ಠಿ ಎಲ್ಲರಿಗೂ ಮಹತ್ವದ್ದು, ಅದರಲ್ಲೂ ವಿಶೇಷವಾಗಿ ಮಹಿಳೆಯರು, ವಯೋವೃದ್ದರೇ ಹೆಚ್ಚಿನ ಸಂಖ್ಯೆಯಲ್ಲಿ ಕಣ್ಣಿನ ಪೊರೆಗೆ ತುತ್ತಾಗುತ್ತಿದ್ದಾರೆ. ಆರ್ಥಿಕವಾಗಿ ದುರ್ಬಲರಾಗಿದ್ದು, ದಿನನಿತ್ಯ ಜೀವನದಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅವರಿಗೆ ಅನುಕೂಲ ಕಲ್ಪಿಸಲು ರೋಟರಿ ಸಂಸ್ಥೆಯು ಪ್ರತಿ ತಿಂಗಳು ಮೊದಲನೆಯ ಭಾನುವಾರ ಕಣ್ಣಿನ ತಪಾಸಣಾ ಶಿಬಿರವನ್ನು ಅಯೋಜಿಸಿದ್ದು, ಇದರ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ರೋಟರಿ ಸಂಸ್ಥೆಯ ಖಜಾಂಚಿ ಆರ್.ಎಂ ಸ್ವಾಮಿ, ಎಲ್.ನಾಗರಾಜು, ಸುರೇಶ್, ಶ್ರೀನಿವಾಸ್, ಅಶೋಕ್, ಕಮಲ್ ರಾಜು, ಪ್ರಭಾಕರ್, ಪಿಆರ್‌ಓ ವಿಜಯಕಾಂತ್ ಹಾಗೂ ಇತರರು ಭಾಗವಹಿಸಿದ್ದರು.