13ರಂದು ಬನ್ನೂರಿನಲ್ಲಿ ನೇತ್ರ ತಪಾಸಣಾ ಶಿಬಿರ

eye camp
Published on

ಬನ್ನೂರು: ಪಟ್ಟಣದ ಬಸ್‌ನಿಲ್ದಾಣದ ಸಮೀಪವಿರುವ ರೋಟರಿ ಶಾಲೆಯ ಆವರಣದಲ್ಲಿ ಸೆ.13ರಂದು ಮಧ್ಯಾಹ್ನ 1 ರಿಂದ 4 ಗಂಟೆವರೆಗೆ ರೋಟರಿ ಸಂಸ್ಥೆ , ಕಾನ್‌ಸಿಂಗ್‌ಜೀ ರಾಜ್‌ಪುರೋಹಿತ್, ಶ್ರೀ ಗೌರಿದೇವಿ, ಲಯನ್ಸ್ ಕ್ಲಬ್ ಆಫ್ ಈರೋಡ್ ಕಾವೇರಿ ಟ್ರಸ್ಟ್, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಮಾಜಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ತಿಳಿಸಿದ್ದಾರೆ.

ತಪಾಸಣೆಗೆ ಬರುವವರು ಆಧಾರ್‌ಕಾರ್ಡ್ ಜೆರಾಕ್ಸ್ ಪ್ರತಿ, ಮೊಬೈಲ್ ನಂಬರ್ ತರುವಂತೆ ತಿಳಿಸಲಾಗಿದೆ. ಕಣ್ಣಿನ ಪೊರೆ, ಗ್ಲಾಕೋಮ, ನೀರು ಸೋರುವಿಕೆ, ಕಣ್ಣಿನಲ್ಲಿ ಗೀಜು ಬರುವುದು, ಹತ್ತಿರ ಮತ್ತು ದೂರ ದೃಷ್ಟಿದೋಷ, ಕಣ್ಣಿನಲ್ಲಿ ಬಿರುಕು ಉಂಟಾಗುವುದು, ವಾರೆ ಕಣ್ಣು, ರಾತ್ರಿ ಕುರುಡುತನಕ್ಕೆ ಚಿಕಿತ್ಸೆ ನೀಡಲಾಗುವುದು ಎಂದು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಣ್ಣಿನ ಪೊರೆ ಇರುವವರನ್ನು ಕೊಯಮತ್ತೂರು ಕಣ್ಣಿನ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಿ, ಶಸ್ತ್ರ ಚಿಕಿತ್ಸೆ ಮಾಡಿಸಿ ಪುನಃ ಸ್ವಸ್ಥಳಕ್ಕೆ ತಂದು ಬಿಡಲಾಗುವುದು. ಸುತ್ತಮುತ್ತಲಿನ ಗ್ರಾಮಸ್ಥರು, ಕಣ್ಣಿನ ಅಂಧತ್ವ ಇರುವವರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net