ಕುಕ್ಕೆಯಲ್ಲಿ ನೇತ್ರ ತಪಾಸಣೆ ಶಿಬಿರ : ನ್ಯೂ ವಿಷನ್ ಜನರೇಷನ್ ಅನ್ವಯ ಆಯೋಜನೆ

New Project (28)
Published on

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಮತ್ತು ಲಯನ್ಸ್ ಕ್ಲಬ್ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಅನ್ವಯ ನೇತ್ರ ಉಚಿತ ತಪಾಸಣೆ ಶಿಬಿರ ಮಂಗಳವಾರ ಸುಬ್ರಹ್ಮಣ್ಯದ ಗ್ರಾಪಂ ಸಭಾಭವನಲದಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕಲ್ಲಾಜೆ ಶಿಬಿರ ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಎನ್.ಎಸ್. ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಪ್ರಾಂತೀಯ ಅಧ್ಯಕ್ಷ ರಂಗಯ್ಯ ಶೆಟ್ಟಿಗಾರ್, ನ್ಯೂವಿಷನ್ ಕಾರ್ಯಕ್ರಮಾಧಿಕಾರಿ ರಾಮಚಂದ್ರ, ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ ಡಿ., ಲಯನ್ಸ್ ಕಾರ್ಯದರ್ಶಿ ಕೃಷ್ಣಕುಮಾರ್ ಬಾಳುಗೋಡು, ಪದಾಧಿಕಾರಿ ಮೋಹನ್‌ದಾಸ್ ರೈ ಇದ್ದರು.

ವಿಮಲಾ ರಂಗಯ್ಯ ಕಾರ್ಯಕ್ರಮ ನಿರೂಪಿಸಿದರು. ಸುರತ್ಕಲ್‌ನ 2.5 ಎನ್‌ವಿಜಿಐ ಮಿತ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ವಿಭಾಗದ ಸಹಯೋಗ ವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net