23ರಂದು ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ

Published on

ಗಂಗೊಳ್ಳಿ: ಗುಜ್ಜಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.23ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1ರವರೆಗೆ ನೇತ್ರ ಉಚಿತ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸೆ ಶಿಬಿರ ನಡೆಯಲಿದೆ. ಲಯನ್ಸ್ ಕ್ಲಬ್ ಹಕ್ಲಾಡಿ ಚನ್ನಕೇಶವ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೆಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ, ಗ್ರಾಪಂ ಗುಜ್ಜಾಡಿ ಮತ್ತು ಹಳೇ ವಿದ್ಯಾರ್ಥಿ ಸಂಘ ಗುಜ್ಜಾಡಿ ನೇತೃತ್ವ ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net