

ಬಂಟ್ವಾಳ: ಮೊಬೈಲ್, ಟಿವಿ ನೋಡುತ್ತ ಹೆಚ್ಚಿನ ಜನರು ದೃಷ್ಟಿ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮುಖ್ಯವಾಗಿ ಯುವ ಸಮುದಾಯ ಈ ಬಗ್ಗೆ ಜಾಗ್ರತೆ ವಹಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್ ಹೇಳಿದರು.
ದ.ಕ. ಜಿಲ್ಲಾ ಪಂಚಾಯಿತಿ ಮಂಗಳೂರು, ತಾಲೂಕು ಪಂಚಾಯಿತಿ ಬಂಟ್ವಾಳ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಜೆಎಸ್‌ಡಬ್ಲ್ಯು ಫೌಂಡೇಷನ್ ಮತ್ತು ಇಂಡಿಯಾ ವಿಷನ್ ಇನ್‌ಸ್ಟಿಟ್ಯೂಟ್ ಸಹಭಾಗಿತ್ವದಲ್ಲಿ, ಬಿ.ಸಿ.ರೋಡ್‌ನಲ್ಲಿ ಮಂಗಳವಾರ ಕಣ್ಣಿನ ತಪಾಸಣಾ ಉಚಿತ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೆಎಸ್‌ಡಬ್ಲ್ಯು ಫೌಂಡೇಷನ್ ಸಿಎಸ್‌ಆರ್ ವ್ಯವಸ್ಥಾಪಕ ಪ್ರದೀಪ್ ಕೆ.ಆರ್ ಮಾಹಿತಿ ನೀಡಿದರು. 170 ಮಂದಿ ಕಣ್ಣಿನ ತಪಾಸಣೆ ಮಾಡಿಕೊಂಡರು. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವಿಶ್ವನಾಥ್ ಬಿ, ಸಂಜೀವಿನಿ ಜಿಲ್ಲಾ ವ್ಯವಸ್ಥಾಪಕ ವಿನೀತ್, ಎನ್‌ಆರ್‌ಎಲ್‌ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಸುಧಾ, ಇಂಡಿಯಾ ವಿಷನ್ ಇನ್‌ಸ್ಟಿಟ್ಯೂಟ್ ಕಾರ್ಯಕ್ರಮ ಸಂಯೋಜಕಿ ಜಾನೆಟ್ ಉಪಸ್ಥಿತರಿದ್ದರು.
ಎನ್‌ಆರ್‌ಎಲ್‌ಎಂ ತಾಲೂಕು ವ್ಯವಸ್ಥಾಪಕ ಪ್ರದೀಪ್ ಕಾಮತ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಎನ್‌ಆರ್‌ಎಲ್‌ಎಂ ತಾಲೂಕು ವಲಯ ಮೇಲ್ವಿಚಾರಕಿ ಕುಸುಮಾ ವಂದಿಸಿದರು.