

ಮೂಡುಬಿದಿರೆ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜನ್ಮ ದಿನದ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣೆ ಶಿಬಿರ ಕೆಸರ್ಗದ್ದೆ ಸುನಂದ ಮಾಧವ ಸಭಾಭವನದಲ್ಲಿ ನಡೆಯಿತು.
ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮೂಡುಬಿದಿರೆ ವಲಯ, ಪ್ರಸಾದ್ ನೇತ್ರಾಲಯ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಎಸ್ಸಿಲೋರ್ ಮಿಷನ್ ಫೌಂಡೇಷನ್ ಟ್ರಸ್ಟ್, ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಚಾರಿಟೆಬಲ್ ಟ್ರಸ್ಟ್, ಹಾಗೂ ನೇತ್ರ ಜ್ಯೋತಿ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆಯಿತು.
ಬೆಳುವಾಯಿ ಗ್ರಾಪಂ ಅಧ್ಯಕ್ಷ ಸುರೇಶ್ ಪೂಜಾರಿ ಶಿಬಿರ ಉದ್ಘಾಟಿಸಿದರು. ಒಡಿಯೂರು ಗ್ರಾಮ ವಿಕಾಸ ಯೋಜನೆ ಯೋಜನಾ ನಿರ್ದೇಶಕ ಕಿರಣ್ ಅಧ್ಯಕ್ಷತೆ ವಹಿಸಿದ್ದರು. ಪ್ರಸಾದ್ ನೇತ್ರಾಲಯದ ಡಾ.ಪ್ರೇಮ್ ಉಪಸ್ಥಿತರಿದ್ದರು.
ಗ್ರಾಮ ವಿಕಾಸ ಯೋಜನೆ ಸೇವಾ ದೀಕ್ಷಿತೆ ಅನಿತಾ ಸ್ವಾಗತಿಸಿದರು. ಮೇಲ್ವಿಚಾರಕಿ ಸುಮಿತ್ರಾ ಕಾರ್ಯಕ್ರಮ ನಿರೂಪಿಸಿದರು. ರೋಹಿಣಿ ಆರ್. ವಂದಿಸಿದರು.
ನೂರಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗವಹಿಸಿದ್ದು, 75 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು. 25 ಮಂದಿಗೆ ಶಸ್ತ್ರ ಚಿಕಿತ್ಸೆ ಉಚಿತ ವ್ಯವಸ್ಥೆ ಭರವಸೆ ಸಂಘಟಕರು ನೀಡಿದರು.