

ಕೊಕ್ಕರ್ಣೆ: ಕೊಕ್ಕರ್ಣೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿರೂರು ಮುದ್ದುಮನೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿವಾರಣಾ ವಿಭಾಗ, ಕೊಕ್ಕರ್ಣೆ ಗ್ರಾಪಂ ಮತ್ತು ಕುಂದಾಪುರ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ನೇತ್ರ ತಪಾಸಣಾ ಉಚಿತ ಶಿಬಿರ ಜರುಗಿತು. ಕೊಕ್ಕರ್ಣೆ ಗ್ರಾಪಂ ಅಧ್ಯಕ್ಷ ಜಯಂತ ಪೂಜಾರಿ ಉದ್ಘಾಟಿಸಿದರು. ನೇತ್ರ ತಜ್ಞೆ ಡಾ.ರಂಜಿತಾ ಕಣ್ಣಿನ ಆರೋಗ್ಯದ ಬಗ್ಗೆ ವಾಹಿತಿ ನೀಡಿದರು. ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಸರ್ವೋದಯ ಪೂಜಾರಿ, ನಾಲ್ಕೂರು ಗ್ರಾಪಂ ಅಧ್ಯಕ್ಷೆ ಶೋಭಾ ಕೆ.ಪೂಜಾರಿ, ಪಿಡಿಒ ಹೆರಿಯಣ್ಣ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಶಂಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಅನಿಲ್ಕುವಾರ್ ಎಸ್.ಸ್ವಾಗತಿಸಿದರು. ರೇಷ್ಮಾ ವಂದಿಸಿದರು.