ಕಣ್ಣಿನ ಆರೋಗ್ಯ, ಸಂರಕ್ಷಣೆ ಮುಖ್ಯ

New Gabbur
Published on

ಹುಬ್ಬಳ್ಳಿ :ಇಲ್ಲಿನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ಜೆಎಸ್​ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಗಬ್ಬೂರಿನ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶಿಬಿರದ ಎರಡನೇ ದಿನವಾದ ಶನಿವಾರ ಏರ್ಪಡಿಸಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಡಾ. ಅಗರವಾಲ್ ಕಣ್ಣಿನ ಆಸ್ಪತ್ರೆಯ ವ್ಯವಸ್ಥಾಪಕ ವಿನಯಕುಮಾರ ಹೊಂಬಾಳಿಮಠ, ಕಣ್ಣು ನಮ್ಮ ದೇಹದ ಅತ್ಯಂತ ಸೂಕ್ಷ್ಮ ಅಂಗ. ಕಣ್ಣಿನ ಆರೋಗ್ಯ ಸಂರಕ್ಷಣೆ ಅತಿ ಮುಖ್ಯವಾದುದು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧಾರವಾಡದ ಅಧಿಕಾರಿ ಭಾಸ್ಕರ ನಾಯ್ಕ ಮಾತನಾಡಿ, ನೈಸರ್ಗಿಕ ಸಂಪತ್ತುಗಳ ದುರುಪಯೋಗದಿಂದಾಗಿ ನೀರಿನ ಲಭ್ಯತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ನೀರಿನ ಮಿತವ್ಯಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರೊ. ಬಾಬುಲಾಲ ದರಗದ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿಶ್ವ ಜಲ ದಿನ ಆಚರಿಸಲಾಯಿತು. ಸುರೇಶ ಲಿಂಬಿಕಾಯಿ, ಪೂರ್ಣಿಮಾ ಕುರಡಿಕೇರಿ, ಸತೀಶ ಸಿ.ವಿ. ಹಾಗೂ ಇತರರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಗ್ರಾಮದ ಸುಮಾರು 70 ಜನರು ಕಣ್ಣಿನ ತಪಾಸಣೆ ಮಾಡಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net