ಮಕ್ಕಳಲ್ಲಿ ಹೆಚ್ಚುತ್ತಿದೆ ಕಣ್ಣಿನ ಸೋಂಕು: ವೈದ್ಯರ ಸಲಹೆ ಏನು?

27 HPT 5A
Published on

ಹೊಸಪೇಟೆ: ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಣ್ಣಿನ ಸೋಂಕು(ಕಾAಜAಕ್ಟಿವಿಟಿಸ್) ಈ ಬಾರಿ ಮಳೆಗಾಲದಲ್ಲೇ ಆರಂಭವಾಗಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ೧೩೦೦ಕ್ಕೂ ಹೆಚ್ಚು ಜನರಲ್ಲಿ ಕಂಡು ಬಂದಿದೆ. ಸೂಕ್ತ ಚಿಕಿತ್ಸೆಯಿಂದ ಪರಿಹಾರ ಸಾಧ್ಯವೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಲೀಂ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ಕಸ ಬಿದ್ದದಂತೆ ಆಗುವ ರೀತಿಯಾಗಿ ಕಣ್ಣು ಚುಚ್ಚುವುದು, ಬೆಳಗ್ಗೆ ಎದ್ದಾಗ ಹೆಚ್ಚು ಪಿಸುರು(ಪಿಚ್ಚು) ಬರುವುದು, ಕಣ್ಣುಗಳು ಕೆಂಪಾಗಿ, ಕಿರಿಕಿರಿ ಹೆಚ್ಚುವುದು, ಕಣ್ಣಲ್ಲಿ ನೀರು ಬರುವುದು, ರೆಪ್ಪೆ ಕಣ್ಣು ದಪ್ಪ ಆಗುವುದು ರೋಗದ ಲಕ್ಷಣಗಳಾಗಿವೆ. ಅಂತಹವರು ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಲ್ಲಿ ತಪಾಸಣೆಗೆ ಒಳಪಟ್ಟು, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ವೈದ್ಯರು ಸೂಚಿಸುವ ಐ ಡ್ರಾಪ್ಸ್ಗಳನ್ನು ಮಾತ್ರ ಬಳಕೆ ಮಾಡಬೇಕು ಎಂದು ತಿಳಿಸಿದ್ದಾರೆ.

ಅಲ್ಲದೇ, ಇದು ವೈರಾಣುವಿನ ಸಮಸ್ಯೆಯಾಗಿದ್ದರಿಂದ ಮುನ್ನೆಚ್ಚರಿಕೆಯೇ ಇದಕ್ಕೆ ಮದ್ದು. ಇದು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದರಿಂದ ರೋಗದ ಲಕ್ಷಣ ಇರುವವರು ಇತರರಿಂದ ದೂರ ಇರಬೇಕು. ಅಂತಹ ವಿದ್ಯಾರ್ಥಿಗಳಿಗೆ ರಜೆ ನೀಡಬೇಕು. ಕನ್ನಡಕ ಧರಿಸಬೇಕು. ಸಮಸ್ಯೆ ಕಡಿಮೆ ಆಗುವವರೆಗೆ ಗಾಳಿಗೆ ಹೋಗಬಾರದು. ದ್ವಿಚಕ್ರ ವಾಹನ ಓಡಿಸಬಾರದು. ಟಿ.ವಿ, ಮೊಬೈಲ್, ಕಂಪ್ಯೂಟರ್ ನೋಡುವುದನ್ನ ಕಡಿಮೆ ಮಾಡಿ, ಕಣ್ಣಿಗೆ ವಿಶ್ರಾಂತಿ ಕೊಡಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net