ಗದಗ: ಉಚಿತ ಕಣ್ಣಿನ ಚಿಕಿತ್ಸೆ

29GDG04
Published on

ಗದಗ: ಎಚ್.ಕೆ. ಪಾಟೀಲ ಸೇವಾ ತಂಡದಿಂದ ತಾಲೂಕಿನ ಹುಲಕೋಟಿ ಗ್ರಾಮದ ರೂರಲ್ ಮೆಡಿಕಲ್ ಸರ್ವಿಸ್ ಸೊಸೈಟಿಯಲ್ಲಿ 24 ಜನರ ಉಚಿತ ಕಣ್ಣಿನ ಚಿಕಿತ್ಸೆಯನ್ನು ಸೋಮವಾರ ಮಾಡಲಾಯಿತು ಎಂದು ಡಾ. ವೇಮನ್ ಸಾಹುಕಾರ್ ಹೇಳಿದರು.

ಉಚಿತ ಕಣ್ಣಿನ ಚಿಕಿತ್ಸೆ ನೆರವೇರಿಸಿದ ಮಾತನಾಡಿದ ಅವರು, ಚುನಾವಣಾ ನಂತರ ಎರಡನೇ ಅವಧಿಗೆ ಸೇವಾ ತಂಡದಿಂದ ಉಚಿತ ಕಣ್ಣಿನ ಚಿಕಿತ್ಸೆ ಆರಂಭಿಸಲಾಗಿದೆ. ಈ ವಾರ 48 ಜನರನ್ನು ಆಯ್ಕೆ ಮಾಡಲಾಗಿದೆ. ಸೋಮವಾರ, ಮಂಗಳವಾರ ತಲಾ 24 ಜನರ ಕಣ್ಣಿನ ಚಿಕಿತ್ಸೆ ಮಾಡಲಾಗುವುದು ಎಂದರು.

ದೃಷ್ಟಿ ಹೀನ ಚಿಕಿತ್ಸೆ, ಕಣ್ಣಿನ ಪೊರೆ ಚಿಕಿತ್ಸೆ, ಕಣ್ಣಿನ ದುರ್ಮಾಂಸ್ ತೆಗಯುವುದು ಸೇರಿ ಹಲವು ಚಿಕಿತ್ಸೆ ಮಾಡಲಾಗುತ್ತಿದೆ. ಇತ್ತೀಚೆಗೆ ಈ ಸಮಸ್ಯೆಗಳು ಜನರಲ್ಲಿ ಅಧಿಕವಾಗಿ ಕಂಡು ಬರುತ್ತಿದ್ದು, ಸೇವಾ ತಂಡದ ಮೂಲಕ ಉಚಿತ ಸೇವೆ ನೆರವೇರಿಸಲಾಗುತ್ತಿದೆ. ಕಳೆದ ಆಗಸ್ಟ್ ತಿಂಗಳಿಂದ ಈವರೆಗೆ 2900 ಜನರಿಗೆ ಉಚಿತ ಕಣ್ಣಿನ ಚಿಕಿತ್ಸೆ, 54 ಹೃದಯ ಸಂಬಂಧಿ ಚಿಕಿತ್ಸೆ, ಎಲುವು ಕೀಲು ಸಂಬಂಧಿಸಿದ 2 ಜನರಿಗೆ ಚಿಕಿತ್ಸೆ ಮಾಡಲಾಗಿದೆ ಎಂದು ವೈದ್ಯರು ಹೇಳಿದರು.

ರೂರಲ್ ಮೆಡಿಕಲ್ ಸರ್ವಿಸಸ್ ಆಸ್ಪತ್ರೆಯಲ್ಲಿ ಅತ್ಯುನ್ನತ ಚಿಕಿತ್ಸಾ ಯಂತ್ರಗಳು ಇವೆ. ಉತ್ತರ ಕರ್ನಾಟಕದಲ್ಲೇ ಅತ್ಯಾಧುನಿಕ ಮಾಡ್ಯುಲರ್ ಆಪರೇಷನ್ ಥೇಟರ್ ಇಲ್ಲಿ ಹೊಂದಲಾಗಿದೆ. ಒಂದು ನಿಮಿಷಕ್ಕೆ 75 ಬಾರಿ ಗಾಳಿ ನವೀಕರಣ (AHU) ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು.

ಆರ್ ಎಂ ಎಸ್ ಮತ್ತು ಎಂ. ಎಂ. ಜೋಷಿ ಸಹಯೋಗದಲ್ಲಿ ಈ ಸೇವೆ ನಡೆಯುತ್ತಿದೆ ಎಂದು ತಿಳಿಸಿದರು. ಡಾ. ಎಸ್. ಆರ್. ನಾಗನೂರು, ಡಾ. ಸವಿತಾ ಹೊಂಬಾಲಿ, ಆಶೋಕ ಮಂದಾಲಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net