ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನೇತ್ರ ಸಮಸ್ಯೆ

Eye problems on the rise in the district
ವಿಜಯಪುರದ ಬಿಎಲ್​ಡಿಇ ಡೀಮ್ಡ್​ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ ವೈದ್ಯಕಿಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಗ್ಲೂಕೊಮಾ ಜಾಗೃತಿ ಸಪ್ತಾಹವನ್ನು ಡಿಎಚ್​ಒ ಡಾ. ಸಂಪತ ಗುಣಾರಿ ಉದ್ಘಾಟಿಸಿದರು. ಡಾ. ರೇಖಾ ಮುಧೋಳ, ಡಾ. ರಾಜೇಶ ಹೊನ್ನುಟಗಿ, ಡಾ. ಸುನೀಲ ಬಿರಾದಾರ ಮತ್ತಿತರರಿದ್ದಾರೆ.
Published on

ವಿಜಯಪುರ: ಜಿಲ್ಲೆಯಲ್ಲಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಜತೆಗೆ ಪ್ರತಿವಾರ ನೇತ್ರ ಶಸಚಿಕಿತ್ಸೆ ಮಾಡಿಸಿಕೊಳ್ಳುವವರೂ ಹೆಚ್ಚಾಗುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಂಪತ್​ ಗುಣಾರಿ ಹೇಳಿದರು.

ನಗರದ ಬಿಎಲ್​ಡಿಇ ಡೀಮ್ಡ್​ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕಿಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನೇತ್ರ ಚಿಕಿತ್ಸಾ ವಿಭಾಗದಿಂದ ಬುಧವಾರ ಹಮ್ಮಿಕೊಂಡಿದ್ದ ಗ್ಲೂಕೊಮಾ ಜಾಗೃತಿ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

ನೇತ್ರ ರೋಗಿಗಳಿಗಾಗಿ ಬಿಎಲ್​ಡಿಇ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡುತ್ತಿದೆ. ಅಲ್ಲದೆ, ಅಧಿಕ ಸಂಖ್ಯೆಯಲ್ಲಿ ಕಣ್ಣಿನ ಶಸಚಿಕಿತ್ಸೆ ನಡೆಸಿ ರೋಗಿಗಳಿಗೆ ನೆರವಾಗುತ್ತಿದೆ. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಆಸ್ಪತ್ರೆಯ ನೇತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥೆ ಡಾ. ರೇಖಾ ಮುಧೋಳ ಮಾತನಾಡಿ, ದೇಶದಲ್ಲಿ 4.50 ಮಿಲಿಯನ್​ ಮತ್ತು ವಿಶ್ವದಲ್ಲಿ 78 ಮಿಲಿಯನ್​ ಜನರು ಗ್ಲೊಕೊಮಾ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆ ರ್ನಿಲಕ್ಷಿಸದೇ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ದೃಷ್ಠಿದೋಷ ಸರಿಪಡಿಸದಿದ್ದರೆ ನರಗಳ ದೌರ್ಬಲ್ಯದಿಂದ ಅಂಧತ್ವಕ್ಕೆ ಕಾರಣವಾಗಲಿದೆ ಎಂದರು.

ಗ್ಲೂಕೊಮಾ ಕಾಯಿಲೆ ಹೊಂದಿರುವ ರೋಗಿಗಳಲ್ಲಿ ತಲೆನೋವು, ದೃಷ್ಟಿ ಣಿಸುವುದು ಹಾಗೂ ಕೆಲವರಲ್ಲಿ ರೋಗದ ಲಣಗಳೇ ಕಂಡು ಬರುವುದಿಲ್ಲ. ಈ ಕಾಯಿಲೆಯು 40 ವರ್ಷಕ್ಕೂ ಮೇಲ್ಪಟ್ಟ ಜನರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ರೋಗಿಗಳಲ್ಲಿ ಹಾಗೂ ದಪ್ಪ ಕನ್ನಡಕ ಬಳಸುವವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ ಎಂದು ತಿಳಿಸಿದರು.

ಆಸ್ಪತ್ರೆ ವೈದ್ಯಕಿಯ ಅಧೀಕ ಡಾ. ರಾಜೇಶ ಹೊನ್ನುಟಗಿ, ವೈದ್ಯರಾದ ಡಾ. ವಲ್ಲಭಾ ಕೆ., ಡಾ. ಸುನೀಲ ಬಿರಾದಾರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net