ನೇತ್ರ ಸಂರಕ್ಷಣೆ ಅತ್ಯಗತ್ಯ

Eye protection is essential
ಬನಹಟ್ಟಿಯ ವಿಶ್ವಚೇತನ ಜ್ಞಾನ ಯೋಗಾಶ್ರಮದಲ್ಲಿ ಹಮ್ಮಿಕೊಂಡಿದ್ದ ನೇತ್ರ ಶಸಚಿಕಿತ್ಸೆ ಉಚಿತ ಶಿಬಿರ ಹಾಗೂ ನೇತ್ರದಾನ ನೋಂದಣಿ ಕಾರ್ಯಕ್ರಮದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿದರು. ವೈದ್ಯಾಧಿಕಾರಿ ಡಾ. ಜಿ.ಎಸ್. ಗಲಗಲಿ, ಬಾಬಾಗೌಡ ಪಾಟೀಲ ಇತರರಿದ್ದರು.
Published on

ರಬಕವಿ/ಬನಹಟ್ಟಿ: ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮ ಅಂಗ. ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಬಡ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಅನುಕೂಲವಾಗಿವೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.

ಶುಕ್ರವಾರ ಬನಹಟ್ಟಿ ನಗರದ ವಿಶ್ವಚೇತನ ಜ್ಞಾನ ಯೋಗಾಶ್ರಮದಲ್ಲಿ ಲಿಂಗರಾಜ ಗ್ರಾಮೀಣಾಭಿವದ್ಧಿ ಸೇವಾ ಸಂಘದಿಂದ ಹಮ್ಮಿಕೊಂಡಿದ್ದ ನೇತ್ರ ಶಸ್ತ್ರ ಚಿಕಿತ್ಸಾ ಉಚಿತ ಶಿಬಿರ ಹಾಗೂ ನೇತ್ರದಾನ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಒತ್ತಡದ ಜೀವನ, ಆಹಾರ ಹಾಗೂ ಜೀವನ ಕ್ರಮದಿಂದ ಆರೋಗ್ಯದಲ್ಲಿ ಒಂದಲ್ಲಾ ಒಂದು ವೈಪರಿತ್ಯ ಕಾಣುತ್ತಿದ್ದೇವೆ. ಎರಡು ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ದೇಹದ ಆರೋಗ್ಯದ ರಕ್ಷಣೆಯ ಜತೆಗೆ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ತಾಲೂಕು ವೈದ್ಯಾಧಿಕಾರಿ ಡಾ. ಜಿ.ಎಸ್. ಗಲಗಲಿ ಅಧ್ಯಕ್ಷತೆ ವಹಿಸಿದ್ದರು. ಬಾಬಾಗೌಡ ಪಾಟೀಲ, ಸುರೇಶ ಅಕ್ಕಿವಾಟ, ಧರೆಪ್ಪ ಉಳ್ಳಾಗಡ್ಡಿ, ಶಿವಬಸಯ್ಯ ಮಠಪತಿ, ವಿಜಯಕುಮಾರ ಡೊಮನಾಳ, ವಿರೇಶ ಆಸಂಗಿ, ವರ್ಧಮಾನ ಕೋರಿ, ಭುಜಬುಲಿ ವೆಂಕಟಾಪೂರ, ಶಿವಪ್ರಕಾಶ ತುಕ್ಕಣ್ಣವರ, ಪವಿತ್ರಾ ತುಕ್ಕಣ್ಣವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net