ಕಣ್ಣಿನ ಆರೋಗ್ಯಕ್ಕಾಗಿ ಸರ್ಕಾರದ ಆಶಾ ಕಿರಣ ಕಾರ್ಯಕ್ರಮ

28CBP2
Published on

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಯೋಜನೆಯಡಿ ಉಚಿತವಾಗಿ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆಯ ಆಶಾ ಕಿರಣ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯು ಕೈಗೊಂಡಿದೆ.
ಸೆ.1 ರಿಂದ ಸೆ.8 ರವರೆಗೆ 38 ನೇ ನೇತ್ರದಾನ ಪಾಕ್ಷಿಕ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಜಿಲ್ಲೆಯಲ್ಲಿನ ಜನರಿಗೆ ಸಮಗ್ರ ನೇತ್ರ ತಪಾಸಣೆ, ಅಗತ್ಯವಿರುವವರಿಗೆ ಉಚಿತ ಕಣ್ಣುಪೊರೆ ಶಸ್ತ್ರ ಚಿಕಿತ್ಸೆಯನ್ನು ಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ನೇತ್ರದಾನದ ಕುರಿತು ಅರಿವು ಮೂಡಿಸುವ ಸಲುವಾಗಿ ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಸಹಾಯಕಿಯರಿಗೆ ವಿಶೇಷ ತರಬೇತಿ ನೀಡಲಾಗಿದೆ.
ಜನರ ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ, ಅಗತ್ಯ ಚಿಕಿತ್ಸೆ ಕೊಡಿಸುವ ಕಾರ್ಯಕ್ರಮ ಆಶಾ ಕಿರಣ. ಇದರ ಬಗ್ಗೆ ಆಯಾ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಹಾಗೂ ಆರೋಗ್ಯ ಸಿಬ್ಬಂದಿ ಜನರಿಗೆ ತಿಳಿಸಬೇಕು. ಮುಖ್ಯವಾಗಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರನ್ನು ಗುರುತಿಸಿ, ತಪಾಸಣೆ ಮಾಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಎಸ್.ಎಸ್.ಮಹೇಶ್ ಕುಮಾರ್ ಸೂಚಿಸಿದ್ದಾರೆ.
ಇತ್ತೀಚೆಗೆ ಇತರೆ ಆರೋಗ್ಯ ಸಮಸ್ಯೆಗಳ ಜತೆಗೆ ಕಣ್ಣುಗಳಿಗೆ ಸಂಬಂಧಿಸಿದಂತೆ ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳನ್ನು ಪ್ರಾರಂಭದ ಹಂತದಲ್ಲಿಯೇ ಗುರುತಿಸಿ, ಅಗತ್ಯ ಚಿಕಿತ್ಸೆಯನ್ನು ನೀಡಬೇಕು. ಇಲ್ಲದಿದ್ದಲ್ಲಿ ದೃಷ್ಟಿಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net