ಸಾಣೇಹಳ್ಳಿ ಶ್ರೀಗಳಿಗೆ ಫ.ಗು. ಹಳಕಟ್ಟಿ ಪ್ರಶಸ್ತಿ

Sanehalli swamiji
Published on

ಬೆಂಗಳೂರು: ಡಾ. ಫ.ಗು. ಹಳಕಟ್ಟಿ ಫೌಂಡೇಷನ್ ನೀಡುವ ವಚನ ಪಿತಾಮಹ ‘ಫ.ಗು. ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ’ಗೆ ಸಾಹಿತ್ಯ ಕ್ಷೇತ್ರದಿಂದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಶಿಕ್ಷಣ ಕ್ಷೇತ್ರದಿಂದ ಪ್ರಭಾಕರ ಕೋರೆ ಹಾಗೂ ಸಮಾಜ ಸೇವೆ ಕ್ಷೇತ್ರದಿಂದ ತೇಜಸ್ವಿನಿ ಅನಂತಕುಮಾರ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ತಲಾ ಒಂದು ಲಕ್ಷ ನಗದು ಒಳಗೊಂಡಿದೆ. ವಚನ ಪಿತಾಮಹ ಫ.ಗು. ಹಳಕಟ್ಟಿ ಸ್ಮರಣಾರ್ಥ ಈ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಸಾಹಿತ್ಯ, ಶೈಕ್ಷಣಿಕ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಸಾಧನೆ ಮಾಡಿದರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.

ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜು.2ರಂದು ಸಂಜೆ 5.30ಕ್ಕೆ ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net