

ಚಿಕ್ಕಮಗಳೂರು: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಪಡೆದರೆ ೨೫ ವರ್ಷ ವಯೋಮಾನದ ಒಳಗಾಗಿ ವಿವಿಧ ಸರ್ಕಾರಿ ಉದ್ಯೋಗ ಪಡೆಯಲು ಸಾಧ್ಯವಾಗಲಿದೆ ಎಂದು ಧಾರವಾಡದ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ವೈ.ಎಚ್.ಗೌಡರ್ ತಿಳಿಸಿದರು.
ನಗರದ ಸಹ್ಯಾದ್ರಿ ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ೨೦೧೪-೨೪ ರವರೆಗೆ ಸುಮಾರು ೧೦ ವರ್ಷಗಳಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯಲ್ಲಿ ತರಬೇತಿ ನೀಡಲಾಗಿದೆ. ಸರ್ಕಾರ ಪ್ರತೀ ವರ್ಷ ಕೆಲವು ಬದಲಾವಣೆಗಳನ್ನು ತರುತ್ತಿದ್ದು, ಅದಕ್ಕೆ ತಕ್ಕಂತೆ ನಾವು ತರಬೇತಿ ನೀಡುತ್ತಿz್ದೆÃವೆ ಎಂದರು.
ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಇದು ಹೋದಾಗ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮಗ್ರವಾಗಿ ಎದುರಿಸಿ ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಹುದ್ದೆಗಳಿಗೆ ನೇಮಕವಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ೧೮ ರಿಂದ ೨೦ ವರ್ಷದ ಒಳಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದರೆ ಐಎಎಸ್, ಐಪಿಎಸ್, ಐಎಫ್‌ಎಸ್ ಮುಂತಾದ ಉನ್ನತ ಹುದ್ದೆಗಳಿಗೆ ಹೋಗಬಹುದಾಗಿದೆ. ಉತ್ತರ ಪ್ರದೇಶದ ಬಡ ರೈತ ಕುಟುಂಬದ ವಿದ್ಯಾರ್ಥಿಯೊಬ್ಬ ತನ್ನ ತಂದೆ-ತಾಯಿಯೊAದಿಗೆ ಜಮೀನು ಕೆಲಸ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಐಎಎಸ್ ಪಾಸಾಗಿ ಸಾಧನೆ ಮಾಡಿದ್ದಾನೆ ಎಂದು ಉದಾಹರಣೆ ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆಗಳು ಅಷ್ಟೇನು ಕಷ್ಟಕರವಲ್ಲ. ಆದರೆ ಉತ್ತಮವಾದ ಮಾರ್ಗದರ್ಶನ, ತರಬೇತಿ ಪಡೆದಾಗ ಸರ್ಕಾರದ ಪರೀಕ್ಷಾ ಪ್ರಾಧಿಕಾರಗಳು ಹೊರಡಿಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದಾಗಿದೆ ಎಂದು ತಿಳಿಸಿದರು.
ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಇ.ಜಿ.ಉಲ್ಲಾಸ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗದ ಬಗ್ಗೆ ಸಮಗ್ರ ಮಾಹಿತಿ ಒದಗಿಸುವ ಹಲವು ದಿನಗಳ ಕನಸು ಇಂದು ನನಸಾಗಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆದರೆ ಗ್ರಾಪಂ, ತಾಪಂ, ಜಿಪಂ ವ್ಯಾಪ್ತಿಯ ಇಲಾಖೆಗಳಲ್ಲಿ ಬಹು ಸುಲಭವಾಗಿ ಉದ್ಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕಿವಿಮಾತು ಹೇಳಿದರು.
ದಿನೇ ದಿನೇ ಹೊಸ ಹೊಸ ಆವಿಷ್ಕಾರಗಳು ಬೆಳೆಯುತ್ತಿರುವುದರಿಂದ ಜೀವನದಲ್ಲಿ ಒಂದು ರೀತಿಯ ಸ್ಪರ್ಧೆ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ವಾಣಿಜ್ಯ ಶಾಸ್ತçದ ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗ ಬಯಸುವುದಾದರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವುದು ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಪ್ರಾರ್ಥನಾ, ಬಿ.ಎಸ್.ಬಿಂದು, ಎಚ್.ಜೆ.ಅನನ್ಯ ಮತ್ತಿತರರಿದ್ದರು.