

ದಾಬಸ್‌ಪೇಟೆ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಆತ್ಮಸ್ಥೆರ್ಯದಿಂದ ಪರೀಕ್ಷೆ ಎದುರಿಸಿ ಸಾಧನೆಗೈದು ರಾಜ್ಯಕ್ಕೆ ಹೆಸರು ತರಬೇಕು. ಕ್ಷೇತ್ರದಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆವ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಪ್ರತಿಭಾ ಪುರಸ್ಕಾರ ನೀಡುತ್ತೇನೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ಶಿವಗಂಗೆ ರಸ್ತೆಯಲ್ಲಿರುವ ಬಿಆರ್‌ಟಿ ಭವನದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಭಾವಿ ಸಿದ್ಧತೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖ ಘಟ್ಟವಾಗಿದೆ. ಆತಂಕ ಬಿಟ್ಟು ಸಮಯ ಸದ್ಬಳಸಿಕೊಂಡು ಪರೀಕ್ಷೆ ಬರೆಯಬೇಕಿದೆ. ಈ ಹಿಂದೆಲ್ಲ ಸೌಲಭ್ಯಗಳಿರಲಿಲ್ಲ, ಆದರೆ, ಈಗ ಎಲ್ಲ ಸೌಲಭ್ಯಗಳಿವೆ. ಶಿಕ್ಷಕರ ಮಾರ್ಗದರ್ಶನ ಪಡೆದುಕೊಂಡು ವಿದ್ಯಾರ್ಥಿಗಳು ನಿರಂತರ ಪರಿಶ್ರಮಪಟ್ಟರೆ ಯಶಸ್ಸು ಸಾಧ್ಯ ಎಂದರು. ಹೊಸಳಯ್ಯ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಟಿ.ಕೆ.ರವಿಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಿವಕುಮಾರ್, ಸಮನ್ವಯಾಧಿಕಾರಿ ಸುಚಿತ್ರಾ, ಗಿರೀಶ್, ಸಿದ್ದರಾಮೇಗೌಡ, ಉಮಾಮಹೇಶ್, ಗುಲ್ಜಾರ್ ಐ.ಡಂಬಳಾ, ಭಾಸ್ಕರ್ ಇದ್ದರು.