ಪೊಲೀಸ್ ಆಯುಕ್ತರ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿ

shashikumar
Published on

ಮಂಗಳೂರು: ನಗರ ಪೊಲೀಸ್ ಆಯುಕ್ತ ಎನ್,ಶಶಿಕುಮಾರ್ ಅವರ ವೈಯುಕ್ತಿಕ ಫೇಸ್‌ಬುಕ್ ಖಾತೆಯ ಫೋಟೊ ಬಳಸಿ ನಕಲಿ ಖಾತೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಫ್ರೆಂಡ್ಸ್ ರಿಕ್ವೆಸ್ಟ್ ಬಂದರೆ ಸ್ವೀಕರಿಸಬಾರದು. ಹಣ ಕೇಳಿದರೆ ಹಣ ನೀಡಬಾರದು ಎಂದು ಆಯುಕ್ತರು ತಿಳಿಸಿದ್ದಾರೆ.

ಇತ್ತೀಚೆಗೆ ಹಿರಿಯ ಅಧಿಕಾರಿಗಳ ಫೇಸ್‌ಬುಕ್ ಖಾತೆಯನ್ನು ನಕಲಿಯಾಗಿ ಸೃಷ್ಟಿಸುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆಯಿಂದ ಇರುವಂತೆ ಶಶಿಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net