ಶಿಕ್ಷಣದಿಂದ ಗುರಿ ಮುಟ್ಟಲು ಸಾಧ್ಯ

Untitled design (37)
ಅಳವಂಡಿ ಮಾತೋಶ್ರೀ ಸಿದ್ದಮ್ಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಆಟದಲ್ಲಿ ಭಾಗವಹಿಸಿರುವುದು.
Published on

ಅಳವಂಡಿ: ವಿದ್ಯಾರ್ಥಿಗಳು ದೈಹಿಕವಾಗಿ ಸದೃಢರಾದಾಗ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಅಶೋಕ ಬಂಡಿ ಹೇಳಿದರು.
ಗ್ರಾಮದ ಮಾತೋಶ್ರೀ ಸಿದ್ದಮ್ಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ, ಬಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಪ್ರತಿಭಾ ಕಾರಂಜಿ ಹಾಗೂ ಕ್ರೀಡೆಗಳಿಂದ ಕ್ರಿಯಾಶೀಲತೆ ಬರಲಿದೆ. ಉತ್ತಮ ಶಿಕ್ಷಣ ಪಡೆದಾಗ ಮಾತ್ರ ಜೀವನದ ಗುರಿ ಮುಟ್ಟಲು ಸಾದ್ಯ ಎಂದರು.
ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು. ಶಿಕ್ಷಕರಾದ ಬಸಮ್ಮ ಹೋರಿ, ಬಾರೆ ಇಮಾಮ ಬಿಸನಳ್ಳಿ, ರವಿ ದೇಸಾಯಿ, ಶಾಕೀರ ಗಡಾದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net