ಧಾರವಾಡ ಬಿಜೆಪಿಯಲ್ಲಿ ಗುಂಪುಗಾರಿಕೆ

Muttannavar New
Published on

ಹುಬ್ಬಳ್ಳಿ : ಧಾರವಾಡ ಜಿಲ್ಲಾ ಬಿಜೆಪಿಯಲ್ಲಿ ಗುಂಪುಗಾರಿಕೆ ಇದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಕೆಲ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಪಾಲಿಕೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಶಿವಾನಂದ ಮುತ್ತಣ್ಣವರ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಶಿಸ್ತು ಮಾಯವಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರ ಕೈವಾಡದಿಂದ ಆ ಪಕ್ಷ ಒಡೆದ ಮನೆಯಂತಾಗಿದೆ ಎಂದು ದೂರಿದರು.

ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಮೂಲೆಗುಂಪು ಮಾಡುವಲ್ಲಿಯೂ ಕೂಡ ಬಿ.ಎಲ್. ಸಂತೋಷ ಅವರ ಕೈವಾಡ ಇದೆ. ಇದೀಗ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಸುಧಾಕರ್, ಶ್ರೀರಾಮಲು ಅವರು ಬಹಿರಂಗವಾಗಿಯೇ ಬಿಜೆಪಿ ನಾಯಕತ್ವದ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದರು.

ಬಿಜೆಪಿಯ ಶಿಸ್ತು ಸಮಿತಿ ಕೇವಲ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳುತ್ತದೆ. ತಾಕತ್ತಿದ್ದರೇ ಗುಂಪುಗಾರಿಕೆ ಮಾಡುತ್ತಿರುವ ಮುಖಂಡರ ಮೇಲೆ ಕ್ರಮಕೈಗೊಳ್ಳಲಿ ಎಂದು ಸವಾಲು ಹಾಕಿದರು.

ವೆಂಕಟ ಸತ್ತಿ, ಪ್ರಕಾಶ ಜಿದ್ದಿ, ಚಂದ್ರಣ್ಣ ನೂಲ್ವಿ ಅವರು ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net