ಫೆ.6ರಿಂದ ಸೂತ್ತೂರಿನಲ್ಲಿ ಜಾತ್ರಾ ಮಹೋತ್ಸವ

11 skpp 2-
Published on

ಸಕಲೇಶಪುರ: ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಫೆಬ್ರವರಿ 6 ರಿಂದ 11 ರವರೆಗೆ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಬಿ.ಆರ್ ಗುರುದೇವ್ ಹೇಳಿದರು.


ಪಟ್ಟಣದ ಸಕಲೇಶಪುರ ಸ್ವಾಮಿ ದೇವಸ್ಥಾನದ ಮುಂಭಾಗ ಸುತ್ತೂರು ಜಾತ್ರಾ ಪ್ರಚಾರ ರಥವನ್ನು ಸ್ವಾಗತಿಸಿ ಮಾತನಾಡಿದ ಅವರು, 6 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ವೈವಿಧ್ಯಮಯ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಪ್ರತಿದಿನ 40ರಿಂದ 45 ಸಾವಿರ ಭಕ್ತರು ತಂಗಲು ವ್ಯವಸ್ಥೆ ಮಾಡಲಾಗಿದೆ ಎಂದರು.


ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ಸಂಯೋಜನಾಧಿಕಾರಿ ಮಂಜುನಾಥ್ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ ಭಜನಾ ಮೇಳ, ವಸ್ತು ಪ್ರದರ್ಶನ, ಕೃಷಿಮೇಳ, ಸ್ಥಳದಲ್ಲೇ ಚಿತ್ರ ರಚಿಸುವ ಸ್ಪರ್ಧೆ, ಚಿತ್ರ ಸಂತೆ, ಸೋಬಾನೆ ಪದ, ರಂಗೋಲಿ, ಗಾಳಿಪಟ ಸ್ಪರ್ಧೆ, ಕುಸ್ತಿ ಪಂದ್ಯಾವಳಿ, ದೇಸಿ ಆಟಗಳು, ಗ್ರಾಮೀಣ ಆಟಗಳ ಸ್ಪರ್ಧೆ, ದನಗಳ ಜಾತ್ರೆ, ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.


ಬಿ.ಡಿ.ಬಸವಣ್ಣ, ಎಡೆಹಳ್ಳಿ ಮಂಜುನಾಥ್, ಸದಾಶಿವ, ಶಿವಪ್ರಸಾದ್, ಹಿತೈಷಿ, ಶಶಿಕಲಾ, ಆರಾಧ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net