ನಕಲಿ ಕ್ಲಿನಿಕ್‌ಗಳಿಗೆ ಬೀಗ

FotoJet (3)
Published on

ಬಾಗೇಪಲ್ಲಿ: ತಾಲೂಕಿನ ವಿವಿಧೆಡೆ ಸೋಮವಾರ ದಾಳಿ ನಡೆಸಿರುವ ತಾಲೂಕು ಆರೋಗ್ಯ ಇಲಾಖೆ ತಂಡ ಆರು ನಕಲಿ ಕ್ಲಿನಿಕ್‌ಗಳಿಗೆ ಬೀಗ ಜಡಿದು, ನಕಲಿ ವೈದ್ಯರಿಗೆ ನೋಟಿಸ್ ಜಾರಿ ಮಾಡಿದೆ. ಆರೋಗ್ಯ ಇಲಾಖೆ ಪರವಾನಗಿ, ವೈದ್ಯ ವೃತ್ತಿಯ ಅರ್ಹತಾ ಪ್ರಮಾಣಪತ್ರ ಹೊಂದಿಲ್ಲದೆ ಬಾಗೇಪಲ್ಲಿ, ಚೇಳೂರು ತಾಲೂಕು ವ್ಯಾಪ್ತಿಯಲ್ಲಿ ಕ್ಲಿನಿಕ್ ತೆರೆದು ಸೇವೆ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಗೆ ದೂರು ಬಂದ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಸಿ.ಎನ್. ಸತ್ಯನಾರಾಯಣರೆಡ್ಡಿ ನೇತೃತ್ವದಲ್ಲಿ ಸೋಮವಾರ ದಾಳಿ ನಡೆಸಲಾಯಿತು. ಈ ವೇಳೆ ಒಟ್ಟು 6 ನಕಲಿ ಕ್ಲಿನಿಕ್‌ಗಳು ಪತ್ತೆಯಾಗಿದ್ದು, ಈ ಪೈಕಿ ಮೂರು ಕ್ಲಿನಿಕ್‌ಗಳನ್ನು ಬಂದ್ ಮಾಡಲಾಗಿದ್ದು, ಉಳಿದ ಮೂವರು ನಕಲಿ ವೈದ್ಯರಿಗೆ ಎಚ್ಚರಿಕೆ ನೋಟಿಸ್ ನೀಡಲಾಯಿತು. ಕಾರ್ಯಾಚರಣೆಯಲ್ಲಿ ಆರೋಗ್ಯ ನೀರೀಕ್ಷಕ ಕ್ರುದ್ದೀನ್, ವ್ಯವಸ್ಥಾಪಕ ಮುಸ್ತಾಕ್ ಆಹಮದ್ ಮತ್ತಿತರರು ಇದ್ದರು.

ಎಲ್ಲೆಲ್ಲಿ ದಾಳಿ?

ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದಲ್ಲಿ ಮೂರು ನಕಲಿ ಕ್ಲಿನಿಕ್ ಮತ್ತು ಚೇಳೂರು ತಾಲೂಕಿನ ಸೋಮನಾಥಪುರ, ನಲ್ಲಗುಟ್ಲಪಲ್ಲಿ, ಪಾಳ್ಯಕೆರೆ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ನಡೆಸುತ್ತಿದ್ದ ನಕಲಿ ಕ್ಲಿನಿಕ್‌ಗಳ ದಾಳಿ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net