ನಕಲಿ ರಜೆ ಆದೇಶ ವೈರಲ್ : ಎಫ್‌ಐಆರ್‌ಗೆ ಡಿಸಿ ಆದೇಶ

fake certificate
Published on

ಮಂಗಳೂರು: ಜುಲೈ 18ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಕಲಿ ಆದೇಶ ವೈರಲ್ ಆಗುತ್ತಿದೆ. ಈ ಬಗ್ಗೆ ಎಫ್‌ಐಆರ್ ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕರಾವಳಿಯಲ್ಲಿ ನಿರಂತರ ಮಳೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ನಿರಂತರ ಸಾಮಾನ್ಯ ಮಳೆ ಸುರಿದಿದೆ. ಉಡುಪಿ ಜಿಲ್ಲೆಯ ತಗ್ಗು ಪ್ರದೇಶಗಳು, ಕೃಷಿಭೂಮಿ ಜಲಾವೃತಗೊಂಡಿದ್ದು, ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಹವಾಮಾನ ಇಲಾಖೆ ಗುರುವಾರವೂ ರೆಡ್ ಅಲರ್ಟ್ ಘೋಷಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net