ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್​: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Bus palti
Published on

ಹಾವೇರಿ: ಸರ್ಕಾರಿ ಬಸ್ಸೊಂದು ಉರುಳಿ ಬಿದ್ದು 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳವಾರ ಹಾವೇರಿ ಜಿಲ್ಲೆ ಹಿರೆಕೇರೂರು ತಾಲೂಕಿನ ಚಿಕ್ಕೊಣತಿ ಗ್ರಾಮದ ಬಳಿ ನಡೆದಿದೆ.

ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ರಾಣೇ ಬೆನ್ನೂರಿಂದ ಹಾನಗಲ್ ಕಡೆ ತೆರಳುತ್ತಿದ್ದ ಬಸ್ ಎನ್ನಲಾಗಿದ್ದು, ಈ ಬಗ್ಗೆ ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net