

ಪುತ್ತೂರು ಗ್ರಾಮಾಂತರ: ಮುಂಡೂರು ಗ್ರಾಮದ ಕೊಂಬಳ್ಳಿ ಬಾವಿಕಟ್ಟೆ ಬಳಿ ಬೃಹದಾಕಾರದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದು ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ತೊಂದರೆಯುಂಟಾಯಿತು. ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಮಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ, ಸ್ಥಳೀಯರಾದ ಪ್ರಕಾಶ್ ಭಟ್, ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.